ದೇಶಹೇಮಾ ಸಮಿತಿ ವರದಿ ಆಧರಿಸಿ ಕಾನೂನು ಕ್ರಮ ಏಕೆ ಕೈಗೊಂಡಿಲ್ಲ: ಕೇರಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
2019ರಲ್ಲೇ ವರದಿ ಬಂದಿದ್ದರೂ ರಾಜ್ಯ ಸರ್ಕಾರ ಇಲ್ಲಿಯವರೆಗೂ ಏಕೆ ನಿಷ್ಕ್ರಿಯವಾಗಿ ಕುಳಿತಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ವರದಿ ಹಿಡಿದುಕೊಂಡು ಕುಳಿತಿರುವುದು ಬಿಟ್ಟರೆ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ ಏನನ್ನೂ ಮಾಡಿಲ್ಲ ಎಂದು ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ.