K Annamalai

'ತಮಿಳುನಾಡು ಸಿಂಗಂ' ಅಣ್ಣಾಮಲೈ BJP ಗೆ ರಾಜೀನಾಮೆ ನೀಡಿದ್ದೇಕೆ: ಪತ್ರದಲ್ಲಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ಪ್ರೇರಿತನಾಗಿ, ತಮಿಳುನಾಡಿನಲ್ಲಿ ಸಕಾರಾತ್ಮಕ ಬದಲಾವಣೆ ತರಲು ಹಾಗೂ ರಾಜ್ಯದ ರಾಜಕೀಯದ ಕಾರ್ಯವೈಖರಿಯನ್ನು ಸುಧಾರಿಸಲು ಆರು ವರ್ಷಗಳ ಹಿಂದೆ ನಾನು ಬಿಜೆಪಿಗೆ ಸೇರಿದ್ದೆ ಎಂದು ಅಣ್ಣಾಮಲೈ ಪತ್ರದಲ್ಲಿ ಬರೆದಿದ್ದಾರೆ.

'ಭವಿಷ್ಯ ಕಾಣುತ್ತಿಲ್ಲ'; ಬಿಜೆಪಿ ನಾಯಕತ್ವ ಭೇಟಿ ಮಾಡಿದ Annamalai; ಸ್ವತಂತ್ರ ರಾಜಕೀಯ ಪಯಣದ ಸುಳಿವು!
ಸಭೆಯಲ್ಲಿ ಅಣ್ಣಾಮಲೈ ಅವರು ತಾವು ರಾಜಕೀಯವಾಗಿ ಸ್ವತಂತ್ರ ಹಾದಿಯಲ್ಲಿ ಸಾಗಲು ಬಯಸುತ್ತಿರುವುದಾಗಿ ಬಿಜೆಪಿ ನಾಯಕತ್ವಕ್ಕೆ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ತೊರೆಯುತ್ತಾರೆ ಎಂಬ ವರದಿಗಳ ಬೆನ್ನಲ್ಲೇ ದೆಹಲಿಗೆ ಹಾರಿದ ಅಣ್ಣಾಮಲೈ; ಕುತೂಹಲ ಮೂಡಿಸಿದ 'ಸಿಂಗಂ' ನಡೆ
ಸ್ವಲ್ಪ ಸಮಯದ ಹಿಂದೆ, ಅಣ್ಣಾಮಲೈ ಅವರು ರಾಷ್ಟ್ರ ರಾಜಧಾನಿಗೆ ತೆರಳಲು ವಿಮಾನ ಹತ್ತುವುದಕ್ಕಾಗಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

'ಸಿಂಗಂ' ಅಣ್ಣಾಮಲೈಗೆ ಟಿಕೆಟ್ ಮಿಸ್ ಆಗಿದ್ದಾ, ಸ್ಪರ್ಧೆಗೆ ಹಿಂದೇಟು ಹಾಕಿದ್ದಾ? ತೇಜಸ್ವಿ ಸೂರ್ಯ ಹೇಳಿದ್ದೇನು?
ಅಣ್ಣಾಮಲೈ ಸ್ಪರ್ಧಿಸುವುದಿಲ್ಲ ಎಂಬುದು ಸ್ಪಷ್ಟವಾದ ನಂತರ, ಎಐಎಡಿಎಂಕೆ 27 ಕ್ಷೇತ್ರಗಳನ್ನು ಹಂಚಿಕೆ ಮಾಡಿ ಗುರುತಿಸಿದ 10 ದಿನಗಳ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.

'ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನೇ ನಿರ್ಧರಿಸಿದೆ': ಟಿಕೆಟ್ ನಿರಾಕರಣೆ ವದಂತಿಗೆ ಅಣ್ಣಾಮಲೈ ಸ್ಪಷ್ಟನೆ
ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವ ಕುರಿತು ಸ್ವತಃ ಅಣ್ಣಾಮಲೈಯವರೇ ಈಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಚುನಾವಣೆಗೆ ಸ್ಪರ್ಧಿಸದ ನಿರ್ಧಾರ ಸಂಪೂರ್ಣವಾಗಿ ತಮ್ಮದೇ ಎಂದು ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ: BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಾಜಿ IPS ಅಧಿಕಾರಿ ಅಣ್ಣಾಮಲೈಗೆ ಕೊಕ್!
ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರಿಗೆ ಪಕ್ಷ ಟಿಕೆಟ್ ನೀಡದೆ, ಅವರಿಗೆ ಶಾಕ್ ನೀಡಿದೆ.

ವಿಧಾನಸಭಾ ಚುನಾವಣಾ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿದ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ!
ಫೆಬ್ರುವರಿ 3 ರಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮ್ಮ ನಿರ್ಧಾರದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕತ್ವಕ್ಕೆ ತಿಳಿಸಿರುವುದಾಗಿ ಹೇಳಿದರು.

ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ: BJP ನಾಯಕ ಅಣ್ಣಾಮಲೈ ಸ್ಫೋಟಕ ಹೇಳಿಕೆ!
ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಈಗ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ.

ಪದಕ ಹಾಕಿಸಿಕೊಳ್ಳಲು DMK ಸಚಿವನ ಪುತ್ರ ನಿರಾಕರಣೆ: BJP ನಾಯಕ Annamalai ಹೇಳಿದ್ದೇನು? Video
ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು, ಬಿಜೆಪಿಯ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ್ದಾರೆ.

