K-RIDE

ಜರ್ಮನಿ ಬ್ಯಾಂಕ್ ನಿಂದ ಕೆ-ರೈಡ್ ಗೆ 4,561 ಕೋಟಿ ರೂ. ಸಾಲ; 2027ಕ್ಕೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ!
ಮಹತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಜಮರ್ನಿಯ ಲಕ್ಸಂಬರ್ಗ್ ನಗರದ ಕೆಎಫ್ ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ರಾಜ್ಯ ಸರ್ಕಾರದ ಕೆ-ರೈಡ್ ಸಂಸ್ಥೆಗೆ 4,561 ಕೋಟಿ ರೂ (500 ಮಿಲಿಯನ್ ಯೂರೋ) ಸಾಲ ನೀಡುತ್ತಿದ್ದು, 2027ಕ್ಕೆ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಬೆಂಗಳೂರು ಉಪನಗರ ರೈಲು ಯೋಜನೆಯ ಮಲ್ಲಿಗೆ ಮಾರ್ಗದ ಕಾಮಗಾರಿ ವೇಗಗೊಳಿಸಲು ಎಲ್&ಟಿಗೆ ಸೂಚನೆ
ಬೆಂಗಳೂರು ಉಪನಗರ ರೈಲು ಯೋಜನೆಯ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಮಲ್ಲಿಗೆ ಮಾರ್ಗದ (ಕಾರಿಡಾರ್-2) ಕಾಮಗಾರಿಯನ್ನು ವೇಗಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತಾ ಅವರು ಗುತ್ತಿಗೆದಾರ ಸಂಸ್ಥೆ ಲಾರ್ಸನ್ ಮತ್ತು ಟೂಬ್ರೊಗೆ ಸೂಚಿಸಿದರು.

ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಎಂಡಿ ನೇಮಕ ಪ್ರಕ್ರಿಯೆ ವಿಳಂಬ; ತೇಜಸ್ವಿ ಸೂರ್ಯ ಕಿಡಿ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶನಿವಾರ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಪೂರ್ಣಾವಧಿಯ ವ್ಯವಸ್ಥಾಪಕ ನಿರ್ದೇಶಕರ ನೇಮಕ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿದೆ ಎಂದು ಟೀಕಿಸಿದರು.

ಬೆಂಗಳೂರು ಉಪನಗರ ರೈಲು ಯೋಜನೆ: ಎರಡು ಕಾರಿಡಾರ್‌ಗಳ ಜೋಡಣೆಗೆ ರೈಲ್ವೆಯಿಂದ ವಿಳಂಬ- K-RIDE
ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನದ ನೋಡಲ್ ಏಜೆನ್ಸಿ ಕೆ-ರೈಡ್ ಭಾರತೀಯ ರೈಲ್ವೆ ವಿರುದ್ಧ ವಿಳಂಬದ ಆರೋಪ ಮಾಡಿದೆ. ನೈಋತ್ಯ ರೈಲ್ವೆ ಗ್ರೀನ್ ಸಿಗ್ನಲ್ ತೋರದ ಕಾರಣ 148.17 ಕಿಮೀ ಯೋಜನೆಯ ನಾಲ್ಕು ಕಾರಿಡಾರ್‌ಗಳ ಪೈಕಿ ಎರಡಕ್ಕೆ ಟೆಂಡರ್ ಕರೆಯಲು ಸಾಧ್ಯವಾಗಲಿಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಉಪನಗರ ರೈಲು ಯೋಜನೆ: ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ
ರೂ. 15, 767 ಕೋಟಿ ವೆಚ್ಚದ ಬೆಂಗಳೂರು ಉಪನಗರ ರೈಲು ಯೋಜನೆಗಾಗಿ ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹೆಬ್ಬಾಳದಲ್ಲಿರುವ ಎರಡು ಮಹಾಗನಿ ಮರಗಳನ್ನು ಯಶವಂತಪುರದ ಕೇಂದ್ರೀಯ ವಿದ್ಯಾಲಯ ಶಾಲೆಯ ಬಳಿಗೆ ಬುಧವಾರ ಸ್ಥಳಾಂತರಿಸಲಾಯಿತು.

