ದೇಶವಿದ್ಯಾರ್ಥಿನಿ ಸಾವು: ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಶಾಲಾ ಬಸ್ಸು, ಪೊಲೀಸ್ ವಾಹನಗಳಿಗೆ ಬೆಂಕಿ, ಪರಿಸ್ಥಿತಿ ಉದ್ವಿಗ್ನ
ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಶಾಲಾ ಬಸ್ಸು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ತಮಿಳು ನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.