kalyana karnataka utsav

ಕಲ್ಯಾಣ ಕರ್ನಾಟಕ ಉತ್ಸವ: ರಜಾಕಾರರ ದೌರ್ಜನ್ಯ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ; ರಾಯಚೂರಿನಲ್ಲಿ ಏಮ್ಸ್‌ಗೆ ಮತ್ತೆ ಬೇಡಿಕೆ
ರಜಾಕಾರರು ಮಾಡಿದ ದೌರ್ಜನ್ಯಗಳು ಅಸಹನೀಯವಾಗಿದ್ದವು. ಅಸಾಧಾರಣ ಸ್ವಾತಂತ್ರ್ಯ ಹೋರಾಟಗಾರರ ಅಚಲ ದೃಢಸಂಕಲ್ಪದಿಂದಾಗಿ ಹೈದರಾಬಾದ್-ಕರ್ನಾಟಕ ಪ್ರದೇಶ ಅಂತಿಮವಾಗಿ ಸ್ವಾತಂತ್ರ್ಯವನ್ನು ಪಡೆಯಿತು-ಸಿಎಂ

ಕಲ್ಯಾಣ ಕರ್ನಾಟಕ ಉತ್ಸವ: ಪ್ರಾದೇಶಿಕ ಅಸಮಾನತೆ; ಜಿಲ್ಲೆ, ತಾಲ್ಲೂಕು ವರ್ಗೀಕರಿಸಿ, ಹೊಸ ಅಭಿವೃದ್ಧಿ ಸೂಚ್ಯಂಕ ತಯಾರಿ- ಸಿಎಂ ಸಿದ್ದರಾಮಯ್ಯ
ಸಂವಿಧಾನದಲ್ಲಿ ಆರ್ಟಿಕಲ್ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈದ್ರಾಬಾದ್ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು.

ಫೆಬ್ರವರಿ 24ರಿಂದ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ
ಕಲಬುರಗಿಯಲ್ಲಿ ಫೆ.24ರಿಂದ ಫೆ.26ರವರೆಗೆ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಲು ಭರದ ಸಿದ್ಧತೆ ನಡೆದಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಶುಕ್ರವಾರ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಮತ್ತೊಬ್ಬ ಉಕ್ಕಿನ ಮನುಷ್ಯ: ಬಸವರಾಜ ಬೊಮ್ಮಾಯಿ
ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ.

