Kanakapura

ರಾಮನಗರ: ಬೆಳಗಿನ ಜಾವ ಬೆಳೆಗೆ ನೀರು ಬಿಡಲು ಹೋಗುತ್ತಿದ್ದ ರೈತನ ಮೇಲೆ ಒಂಟಿ ಸಲಗ ದಾಳಿ; ಸ್ಥಳದಲ್ಲೇ ಸಾವು
ಬೆಳಗಿನ ಜಾವ ಬೆಳೆಗೆ ನೀರು ಹರಿಸಲು ಹೋಗುತ್ತಿದ್ದ ರೈತನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

'ಮಹಾಪುರುಷರು ಜನ್ಮತಳೆದ ನೆಲವನ್ನು 'ರಿಯಲ್ ಎಸ್ಟೇಟ್ ಪಾಪಕುಂಡʼ ಮಾಡಿದ್ಯಾರು; ಚೂರು ಮಾಡೋದಕ್ಕೆ ರಾಮನಗರ ಕಲ್ಲುಬಂಡೆಯೇ?'
ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ ಶಿವಕುಮಾರ್ ಅರಿತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕನಕಪುರ ಬೆಂಗಳೂರಿಗೆ ಸೇರುತ್ತದೆ; ಇಲ್ಲಿನ ಭೂಮಿಯನ್ನು ನಗರದ ಜನರಿಗೆ ಮಾರಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್
ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

'ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುತ್ತೇನೆ': ಡಿಸಿಎಂ ಡಿಕೆಶಿ ಹೇಳಿಕೆಗೆ ಎಚ್ ಡಿಕೆ ತೀವ್ರ ವಿರೋಧ
ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್, ಜಿಲ್ಲೆಯ ಜನತೆಗೆ ಮಾಡಿದ ದ್ರೋಹ: ನಿಖಿಲ್ ಕುಮಾರಸ್ವಾಮಿ
ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಹೈಜಾಕ್ ಮಾಡುವ ಮೂಲಕ ಜಿಲ್ಲೆಯ ಜನತೆಗೆ ಕಾಂಗ್ರೆಸ್ ಸರ್ಕಾರ ದ್ರೋಹವೆಸಗಿದೆ ಎಂದು ನಿಖಿಲ್ ಕುಮಾರ್ ಸ್ವಾಮಿ ಆರೋಪಿಸಿದ್ದಾರೆ.

ಸಾತನೂರು ಭೀಕರ ರಸ್ತೆ ಅಪಘಾತ ಪ್ರಕರಣ: ಮೃತಪಟ್ಟ 6 ಮಂದಿ ಪೈಕಿ ಇಬ್ಬರು ವಿಧಾನಸೌಧ ಸಿಬ್ಬಂದಿಗಳು!
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಕ್ವಾಲೀಸ್ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, ಬಸ್ಸಿನಲ್ಲಿದ್ದ 18 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆ ಗ್ರಾಮದ ಬಳಿ ನಡೆದಿದೆ.

ಸಿಎಂ ಸ್ಥಾನ ಸಿಗಲಿಲ್ಲವೆಂದು ಆತಂಕ, ನಿರಾಸೆಪಡುವ ಅಗತ್ಯವಿಲ್ಲ: ಸೂಕ್ತ ಕಾಲದಲ್ಲಿ ಎಐಸಿಸಿ ಸೂಕ್ತ ನಿರ್ಧಾರ- ಡಿಕೆ ಶಿವಕುಮಾರ್
ನನಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲವೆಂದು ಆತಂಕ, ನಿರಾಸೆಪಡುವ ಅಗತ್ಯವಿಲ್ಲ, ಸೂಕ್ತ ಕಾಲದಲ್ಲಿ ಎಐಸಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತನ್ನ ಕ್ಷೇತ್ರದ ಮತದಾರರಿಗೆ ಹೇಳಿದ್ದಾರೆ.

ಡಿಕೆಶಿ ಸತತ 8ನೇ ಬಾರಿ ಗೆಲುವು; ಈ ಬಾರಿ ದಾಖಲೆಯ 1,21,595 ಮತಗಳ ಅಂತರದಿಂದ ಜಯ
1989 ರಿಂದ ಗೆಲುವಿನ ನಾಗಾಲೋಟವನ್ನು ಮುಂದುವರೆಸಿರುವ 'ಕನಕಪುರ ಬಂಡೆ' ಖ್ಯಾತಿಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಒಕ್ಕಲಿಗ ಪ್ರಬಲ ನಾಯಕ ಡಿ ಕೆ ಶಿವಕುಮಾರ್ ಅವರು ಶನಿವಾರ ಸತತ ಎಂಟನೇ ಬಾರಿಗೆ....

ಎರಡು ದಶಕಗಳ ನಂತರ ಕನಕಪುರದಲ್ಲಿ ಮೊದಲ ಬಾರಿಗೆ ನೈಜ ಸ್ಪರ್ಧೆ; ದಾದಾಗಿರಿ-ಗೂಂಡಾಗಿರಿಯಿಲ್ಲದೆ ಮತದಾನ: ಅಶೋಕ್ (ಸಂದರ್ಶನ)
ಪಕ್ಷದ ನಿರ್ದೇಶನದ ಮೇರೆಗೆ ಕನಕಪುರದಿಂದ ಕಣದಲ್ಲಿದ್ದು, ವಾಸ್ತವವಾಗಿ ಅಸ್ತಿತ್ವವೇ ಇಲ್ಲದ ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟುವ ಜತೆಗೆ ಕ್ಷೇತ್ರವನ್ನು ಗೆಲ್ಲಿಸುವುದು ನನ್ನ ಕಾರ್ಯವಾಗಿದೆ ಎಂದು ಅಶೋಕ ಹೇಳಿದರು.

