ರಾಜ್ಯಆಸ್ತಿ ಬಗ್ಗೆ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕಿ ಕನೀಜ್ ಫಾತಿಮಾಗೆ ಕರ್ನಾಟಕ ಹೈಕೋರ್ಟ್ ನೋಟಿಸ್
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಅವರ ಆಯ್ಕೆಯನ್ನು ಪ್ರಶ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಕನೀಜ್ ಫಾತಿಮಾ ಅವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.