Kanhaiya Kumar

ಟಿವಿ ಸಂದರ್ಶನದಲ್ಲಿ ಪ್ರಧಾನಿ ಮೋದಿ, RSS ನಿಂದನೆ ಆರೋಪ: ಕನ್ಹಯ್ಯಾ ಕುಮಾರ್ ವಿರುದ್ಧ ಪೊಲೀಸರಿಗೆ BJP ದೂರು
ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ.

ಫಡ್ನವೀಸ್ ಪತ್ನಿ ಕುರಿತು ಕನ್ಹಯ್ಯಾ ಕುಮಾರ್ ವಿವಾದಾತ್ಮಕ ಹೇಳಿಕೆ! ಬಿಜೆಪಿ ಖಂಡನೆ
ಫಡ್ನವೀಸ್ ಅವರ ಧರ್ಮಯುದ್ಧ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಕನ್ಹಯ್ಯಾ ಕುಮಾರ್, ಧರ್ಮವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಅಂತಹ ಜನರು ಧರ್ಮ ರಕ್ಷಿಸುತ್ತಿಲ್ಲ. ಫಢ್ನವೀಸ್ ಅವರ ಪತ್ನಿ ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಮಾಡ್ತಾ ಇರ್ತಾರೆ.

ಎನ್ಎಸ್ಯುಐ ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ನೇಮಕಗೊಳಿಸಿದ ಕಾಂಗ್ರೆಸ್
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯುಐ) ಉಸ್ತುವಾರಿಯಾಗಿ ಕನ್ಹಯ್ಯಾ ಕುಮಾರ್ ಅವರನ್ನು ಕಾಂಗ್ರೆಸ್ ಗುರುವಾರ ನೇಮಕ ಮಾಡಿದೆ.

ದ್ವೇಷ ಆಧಾರಿತ ರಾಜಕಾರಣ ದೇಶದ ಅಭಿವೃದ್ಧಿಗೆ ನೆರವಾಗುವುದಿಲ್ಲ: ಕನ್ಹಯ್ಯಾ ಕುಮಾರ್
ಜನರಲ್ಲಿ ಕೋಪ ಮತ್ತು ಹತಾಶೆ ಇರುತ್ತದೆ, ಅವರು ತಮ್ಮ ಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ಬಯಸುತ್ತಾರೆ. ದ್ವೇಷಾಧಾರಿತ ರಾಜಕಾರಣ ನಮಗೆ ಸಹಾಯ ಮಾಡುವುದಿಲ್ಲ .

ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಕತ್ತು ಹಿಸುಕಲು ಸಿಬಿಐ ಬಳಸಿಕೊಳ್ಳುತ್ತಿದೆ: ಕನ್ಹಯ್ಯಾ ಕುಮಾರ್
ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಕತ್ತು ಹಿಸುಕಲು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಅವರು ಶನಿವಾರ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಸಮ್ಮುಖದಲ್ಲಿ ಕನ್ನಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ, ಶಾಸಕ ಜಿಗ್ನೇಶ್ ಮೆವಾನಿ ಸೇರ್ಪಡೆ ಸದ್ಯಕ್ಕಿಲ್ಲ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿಪಿಐ ಯುವ ಮುಖಂಡ, ಜೆಎನ್ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

'ಕಾಂಗ್ರೆಸ್ ಒಂದು ದೊಡ್ಡ ಹಡಗು, ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್
ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ' ಎಂದು ಕನ್ನಯ್ಯ ಕುಮಾರ್ ಹೇಳಿದ್ದಾರೆ.

ಸೆಪ್ಟೆಂಬರ್ 28ಕ್ಕೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಸೇರ್ಪಡೆ?
ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತ ಹೇಳಿಕೆಗಳು ದುರುದ್ದೇಶಪೂರಿತ: ಸಿಪಿಐ
ಜೆಎನ್ ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ಹೇಳಿಕೆಗಳು ದುರುದ್ದೇಶಪೂರಿತವಾಗಿವೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ.

