ರಾಜ್ಯಚಾಟಿ ಬೀಸಿದ ಬಳಿಕ ಎಚ್ಚೆತ್ತ ಸರ್ಕಾರ, ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದ ಸಿದ್ದರಾಮಯ್ಯ
ಹಿಂದಿ ಏರಿಕೆ ವಿರುದ್ಧ ರಾಜ್ಯದಲ್ಲಿ ಕೂಗುಗಳು ಕೇಳಿಬರುತ್ತಿರುವಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪೇಚಿಗೆ ಸಿಲುಕಿದ್ದ ಘಟನೆ ನಡೆದಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ಸೈಟ್ನಲ್ಲಿ'ಹರ್ ಘರ್ ತಿರಂಗಾ' ಕಾರ್ಯಕ್ರಮದ ಬಗ್ಗೆ ಹಿಂದಿಯಲ್ಲೇ ಮಾಹಿತಿ ಪ್ರಕಟಿಸಿದ್ದನ್ನು ಸಿದ್ದರಾಮಯ್ಯ ಆಕ್ಷೇಪಿಸಿದ್ದರು.