kannada language

ಮಕ್ಕಳು ಇಷ್ಟು ನಾಜೂಕಾದರೆ ಮುಂದಿನ ಜೀವನ ಎದುರಿಸುವುದು ಹೇಗೆ? ಪಾಲಕರೇ ಮಕ್ಕಳನ್ನು ಅಂಜುಬುರುಕರನ್ನಾಗಿ ಮಾಡುತ್ತಿರುವುದೇಕೆ?
ಶಾಲೆಗಳಲ್ಲಿ ಕನ್ನಡವನ್ನು ಬೋಧನಾ ಮಾಧ್ಯಮವನ್ನಾಗಿಸಲು ಸರ್ಕಾರ ಹಲವಾರು ಪ್ರಯತ್ನ ಮಾಡಿದರೂ ನ್ಯಾಯಾಲಯಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕನ್ನಡ ರಾಜ್ಯೋತ್ಸವ ಭಾಷಣದಲ್ಲಿ ಹೇಳಿಕೆ ನೀಡಿದ್ದರು.

ಕನ್ನಡದ ಅಸ್ಥಿತ್ವ ಮತ್ತು ಅಸ್ಮಿತೆ
ನವೆಂಬರ್ 1ನೇ ತಾರೀಖು. ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಸಂಭ್ರವೋ ಸಂಭ್ರಮ. ಖನ್ನಡ ಓರಾಟಗಾರರಿಗೆ(ಸರಿಯಾದ ಪದ ಬಳಕೆ-ಕನ್ನಡ ಹೋರಾಟಗಾರರು) ಮತ್ತು ನಮ್ಮ ರಾಜಕೀಯ ಧುರೀಣರಿಗಂತೂ ನವೆಂಬರ್ 1 ರಿಂದ 30ನೇ ತಾರೀಖಿನವರೆಗೂ ಪುರುಸೊತ್ತೇ ಇರುವುದಿಲ್ಲ.

'ಕನ್ನಡ ಅತ್ಯಂತ ಸುಂದರ ಭಾಷೆ, ವಿನೋದವಾಗಿ ಭಾಷೆಯನ್ನು ಹೀಗೆ ಕಲಿಯಬಹುದು ನೋಡಿ': ಕಲಾವಿದನ ಕೈಚಳಕಕ್ಕೆ ಪ್ರಧಾನಿ ಮೋದಿ ಫಿದಾ
ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ, ಕನ್ನಡ ವರ್ಣಮಾಲೆಯನ್ನು ಮಕ್ಕಳು ಸುಲಭವಾಗಿ, ವಿನೋದವಾಗಿ ಹೇಗೆ ಕಲಿಯಬಹುದು ಎಂದು ಕಲೆಗಾರ ಬಾದಲ್ ನಂಜುಂಡಸ್ವಾಮಿ (Baadal Nanjunadaswamy) ಪ್ರತಿ ಅಕ್ಷರಕ್ಕೆ ಚಿತ್ರಗಳನ್ನು ಜೋಡಿಸಿ ತೋರಿಸಿಕೊಟ್ಟಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ಹಾನಿ ಮಾಡುತ್ತಿದೆ: ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಆರೋಪ
86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರು ಡಬಲ್ ಇಂಜಿನ್ (ರಾಜ್ಯ ಮತ್ತು ಕೇಂದ್ರ) ಬಿಜೆಪಿ ಸರ್ಕಾರಗಳು ಕನ್ನಡ ಭಾಷೆಯ ರಕ್ಷಣೆ ಮತ್ತು ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಮೇಲೆ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

'ಮೊದ್ಲು ನಿಮ್ಮ ಅಧಿಕಾರಿಗಳಿಗೆ ಕನ್ನಡ ಕಲ್ಸಿ': ಬೊಮ್ಮಾಯಿಗೆ ನೆಟ್ಟಿಗರ ತರಾಟೆ; ತಿದ್ದುಪಡಿ ಮಾಡಿ ಹೊಸ ಆದೇಶ ಹೊರಡಿಸಿದ ಸರ್ಕಾರ!
ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ ಮತ್ತು ಸಾರ್ವಭೌಮ.ಕನ್ನಡಿಗರು ಕನ್ನಡ ಬರೆಯುವಾಗ, ಮಾತನಾಡುವಾಗ, ನಿತ್ಯ ವ್ಯವಹಾರದಲ್ಲಿ ಕನ್ನಡ ಪದಗಳನ್ನು ತಪ್ಪಿಲ್ಲದೆ ಬಳಸಬೇಕಾದ್ದು ಕರ್ತವ್ಯ.

ಪ್ರಥಮ, ದ್ವಿತೀಯ ಭಾಷೆಯಾಗಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ರಾಜ್ಯ ಸರ್ಕಾರಕ್ಕೆ ನ್ಯಾಯಾಲಯವು ಪ್ರತಿಕ್ರಿಯಿಸುವಂತೆ ನೋಟಿಸ್ ಜಾರಿ ಮಾಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020: ಪದವಿ ಕೋರ್ಸ್ ನ ಮೊದಲ ಎರಡು ವರ್ಷ ಕನ್ನಡ ಭಾಷೆ ಕಡ್ಡಾಯ
ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದಲ್ಲಿ ಮೊದಲ ವರ್ಷದ ಪದವಿ ತರಗತಿಯಲ್ಲಿ ಜಾರಿಗೆ ಬರುತ್ತಿದೆ. ದೇಶಾದ್ಯಂತ ಏಕರೂಪ ಶಿಕ್ಷಣ ಪದ್ಧತಿಯಿಂದ ಸ್ಥಳೀಯ ಮಾತೃಭಾಷೆಗೆ ಧಕ್ಕೆಯುಂಟಾಗುತ್ತದೆ ಎಂದು ಈ ಶಿಕ್ಷಣ ನೀತಿಯನ್ನು ವಿರೋಧಿಸುವವರು ಹೇಳುತ್ತಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆಗೆ ಕೂಡ ಆದ್ಯತೆ ಕೊಡಿ: ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ!
ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ.

