ರಾಜ್ಯಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಪಾಲನೆ ಮಾಡದ ಅಂಗಡಿ ಮುಂಗಟ್ಟುಗಳ ಮೇಲೆ ಸದ್ಯಕ್ಕೆ ಕ್ರಮ ಬೇಡ; ಹೈಕೋರ್ಟ್ ಆದೇಶ
ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳು, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬಾರದು ಎಂದು ರಾಜ್ಯ ಸರ್ಕಾರಕ್ಕೆ ಸೋಮವಾರ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದ್ದು, ನಾಮಫಲಕದಲ್ಲಿ ಎರಡು ಕನ್ನಡ ಪದ ಬಳಕೆ ಮಾಡಿದರೆ ಏನಾಗಲಿದೆ ಎಂದು ಅರ್ಜಿದಾರರನ್ನು ಮೌಖಿಕವಾಗಿ ಪ್ರಶ್ನಿಸಿದೆ.