ರಾಜ್ಯನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು: ಸಿಎಂ ಸಿದ್ದರಾಮಯ್ಯ
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.