Karnataka assembly election 2023

ಮೈಸೂರು: ಬಿಜೆಪಿ ಪ್ರಚಾರದ ರಥದ ಮೇಲೆ ಕಲ್ಲು ತೂರಾಟ: ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಪಾರು, ಹಲವರಿಗೆ ಗಾಯ
ಬಿಜೆಪಿ ಪ್ರಚಾರದ ರಥದ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ರಥದ ಮೇಲಿದ್ದ ಸಚಿವ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ ಪಕ್ಷದ 5ನೇ ಗ್ಯಾರಂಟಿ ಘೋಷಣೆ ಮಾಡಿದ ರಾಹುಲ್ ಗಾಂಧಿ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವುದಾಗಿ ಘೋಷಣೆ ಮಾಡಿದೆ.

ಯುವಕನ ವಿರುದ್ಧದ ನೀತಿ ಸಂಹಿತಿ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹಿಂಪಡೆದ ಪೊನ್ನಣ್ಣ
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಯುವಕನ ವಿರುದ್ಧ ಸಲ್ಲಿಸಿದ್ದ ದೂರನ್ನು ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಗುರುವಾರ ಹಿಂಪಡೆದಿದ್ದಾರೆ.

ಮೋದಿ, ಪ್ರಿಯಾಂಕಾ ಆಟ ರಾಜ್ಯದಲ್ಲಿ ನಡೆಯಲ್ಲ: ಎಚ್ ಡಿ ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್‌ನ ಪ್ರಿಯಾಂಕಗಾಂಧಿ, ರಾಹುಲ್‌ಗಾಂಧಿ ಯಾರೇ ರಾಜ್ಯಕ್ಕೆ ಬಂದರೂ ಅವರ ಆಟ ಇಲ್ಲಿ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

'ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಳ್ಳಲು ಲಕ್ಷ್ಮಣ ಸವದಿ ಕಾರಣ, ಅವನ ರಾಜಕೀಯ ಜೀವನ ಅಂತ್ಯವೇ ನನ್ನ ಗುರಿ': ರಮೇಶ್ ಜಾರಕಿಹೊಳಿ
ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಳ್ಳಲು ಈಗ ಕಾಂಗ್ರೆಸ್ ಪಕ್ಷ ಸೇರಿರುವ ಲಕ್ಷ್ಮಣ ಸವದಿಯೇ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಆರ್ ಪುರ ಕ್ಷೇತ್ರ: ಐಟಿ ಕಾರಿಡಾರ್ ನ ಮೂಲಭೂತ ಸೌಕರ್ಯ ಕೊರತೆಯೇ ಬೈರತಿ ಬಸವರಾಜ್ ಗೆಲುವಿಗೆ ಸಮಸ್ಯೆ?
ಕೆಆರ್ ಪುರವು ಬೆಂಗಳೂರಿನ ಪ್ರಮುಖ ಟೆಕ್ ಕಾರಿಡಾರ್‌ನ ಭಾಗವಾಗಿದ್ದು, ಹಲವಾರು ಐಟಿ ಕಂಪನಿಗಳನ್ನು ಹೊಂದಿದೆ. ಈ ಪ್ರದೇಶವು ಹಳೆಯ ಬೆಂಗಳೂರು ನಗರ ಮುನ್ಸಿಪಲ್ ಕಾರ್ಪೊರೇಶನ್‌ನ ಭಾಗವಾಗಿದ್ದು, ಅಭಿವೃದ್ಧಿ ಕಾರ್ಯಗಳು, ಟ್ರಾಫಿಕ್ ಅವ್ಯವಸ್ಥೆ, ಕೆಲವು ಕಡೆಗಳಲ್ಲಿ ಹದಗೆಟ್ಟ ರಸ್ತೆಗಳೇ ಈ ಕ್ಷೇತ್ರದ ಅಭ್ಯರ್ಥಿಗಳಿಗೆ ಸವಾಲಾಗಿದೆ.

ಬಿಜೆಪಿಯ ಎನ್.ಮಹೇಶ್ ಸೋಲಿಸುವ ಗುರಿ, ನಾಮಪತ್ರ ಹಿಂಪಡೆದ ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ, ಕಾಂಗ್ರೆಸ್ ಗೆ ಬೆಂಬಲ ಘೋಷಣೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ ಅವರು ತಮ್ಮ ನಾಪಮತ್ರ ವಾಪಸ್ ಪಡೆದಿದ್ದಾರೆ.

'ಕರ್ನಾಟಕಕ್ಕೆ ಡಬಲ್ ಎಂಜಿನ್ ಸರ್ಕಾರ ಬೇಕಾ, ರಿವರ್ಸ್ ಗೇರ್ ಸರ್ಕಾರ ಬೇಕಾ ನೀವೇ ನಿರ್ಧರಿಸಿ': ಅಮಿತ್ ಶಾ
ಕರ್ನಾಟಕದಲ್ಲಿ ಸುಭದ್ರ ಮತ್ತು ಸುಸ್ಥಿರ ಸರ್ಕಾರ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಮನವಿ; ಸಿಬಿಐಗೆ ಹೈಕೋರ್ಟ್ ನೋಟಿಸ್!
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಚುನಾವಣೆ ನಿಮಿತ್ತ ಧಾರವಾಡದಲ್ಲಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

