Karnataka Assembly Elections

ಸೋಲಿಗೆ ಕಾರಣವೇನು?: ಪಕ್ಷದ ಮತಗಳಿಕೆ ಕಡಿಮೆಯಾಗಿಲ್ಲ, ಜೆಡಿಎಸ್ ಮತಗಳು ಕಾಂಗ್ರೆಸ್‌ಗೆ ಹಂಚಿಕೆಯಾಗಿದೆ- ಬಿಜೆಪಿ
ಚುನಾವಣೆಯಲ್ಲಿ ನಿರಾಶಾದಾಯಕ ಸೋಲಿನ ನಂತರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸೋಲಿಗೆ ಕಾರಣ ಏನೆಂಬುದನ್ನು ಪರಾಮರ್ಶಿಸಲು ಪಕ್ಷದ ಚುನಾವಣಾ ಸಮಿತಿ ಸದಸ್ಯರು ಮತ್ತು ಶಾಸಕರೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್
2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ಸೋತಾಗ ಬಿಜೆಪಿ ಅಪಮಾನ ಎಂದುಕೊಳ್ಳುತ್ತದೆ, ಸುಳ್ಳಿನ ಕಾರ್ಖಾನೆಗಳು ಅತ್ಯಂತ ಕ್ರಿಯಾಶೀಲವಾಗಿವೆ: ಕಾಂಗ್ರೆಸ್
ಚುನಾವಣೆಯಲ್ಲಿ ಸೋತ ಬಿಜೆಪಿಗೆ ಅಪಮಾನವಾಗಿದೆ ಮತ್ತು ಪ್ರತಿಸ್ಪರ್ಧಿ ಪಕ್ಷವು ಸಾಮಾಜಿಕ ಸಾಮರಸ್ಯವನ್ನು ಕದಡಲು ದುಷ್ಕೃತ್ಯದ ಪ್ರಯತ್ನಗಳನ್ನು ಮಾಡುತ್ತಿದೆ. ದ್ವೇಷ ಉತ್ಪಾದಿಸುವ ಕಾರ್ಖಾನೆಗಳು ಹೈಪರ್ ಆ್ಯಕ್ಟಿವ್ ಆಗಿವೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಶಾಸಕಾಂಗ ಸಭೆಗೆ ವೇದಿಕೆ ಸಜ್ಜು, ಸೋಮವಾರ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ
ಶನಿವಾರ ಸಂಜೆ ಇಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನೂತನ ಮುಖ್ಯಮಂತ್ರಿ ಆಯ್ಕೆಗೆ ವೇದಿಕೆ ಸಜ್ಜಾಗಿದೆ. ಮೂಲಗಳ ಪ್ರಕಾರ, ಸೋಮವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಸುನಾಮಿ ನಡುವೆಯೂ ಸಿಲಿಕಾನ್ ಸಿಟಿಯಲ್ಲಿ ಸ್ಥಾನ ಉಳಿಸಿಕೊಂಡ ಬಿಜೆಪಿ
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಸರಳ ಬಹುಮತದೊಂದಿಗೆ ಬಿಜೆಪಿಯನ್ನು 66 ಸ್ಥಾನಗಳಿಗೆ ಇಳಿಯುವಂತೆ ಮಾಡಿದೆ.

ಎರಡು ದಶಕಗಳ ನಂತರ ಚಿಕ್ಕಮಗಳೂರು, ಕೊಡಗಿನಲ್ಲಿ ಕ್ಲೀನ್ ಸ್ವೀಪ್; ಕಳೆದುಕೊಂಡಿದ್ದ ವೈಭವವನ್ನು ಮತ್ತೆ ಗಳಿಸಿದ ಕಾಂಗ್ರೆಸ್!
ಸುಮಾರು ಎರಡು ದಶಕಗಳ ನಂತರ ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿ ಹಳೆಯ ವೈಭವವನ್ನು ಮರಳಿ ಪಡೆದಿದೆ. ಇನ್ನೊಂದೆಡೆ, ಕೊಡಗು ಜಿಲ್ಲೆಯಲ್ಲಿ ಬಿಜೆಪಿಯ ಎರಡು ದಶಕಗಳ ಹಿಡಿತವನ್ನು ಕಾಂಗ್ರೆಸ್ ಛಿದ್ರಗೊಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನಲ್ಲಿ ಮುಗಿಲುಮುಟ್ಟಿದ ಸಂಭ್ರಮ, ಬಿಜೆಪಿಯಲ್ಲಿ ನೀರವ ಮೌನ
ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲು ಆರಂಭಿಸುತ್ತಿದ್ದಂತೆಯೇ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿ, ಸಿಹಿ ಹಂಚಿ ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂಬ ವಿಶ್ವಾಸದೊಂದಿಗೆ ಸಂಭ್ರಮಿಸಿದರು.

ನೆಲಕಚ್ಚಿದ ಜಗದೀಶ್ ಶೆಟ್ಟರ್ ಪ್ರತಿಷ್ಠೆ; ಲಿಂಗಾಯತ ಹೃದಯಭಾಗದಲ್ಲಿಯೇ ಭಾರಿ ಅಂತರದಿಂದ ಸೋಲು
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರಬಲ ಲಿಂಗಾಯತ ನಾಯಕ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸುಮಾರು 34,053 ಮತಗಳ ಅಂತರದಿಂದ ಮೊದಲ ಬಾರಿಗೆ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ಯಾರು?
ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಸಂಭ್ರಮಿಸಿದೆ. ಕಲ್ಯಾಣ ಕರ್ನಾಟಕವು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಏಳು ಜಿಲ್ಲೆಗಳನ್ನು ಒಳಗೊಂಡಿದೆ.

