Karnataka Assembly Elections

ಬೆಂಗಳೂರು: ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಲಾಲ್‌ಬಾಗ್‌ನಲ್ಲಿ ಜಾಗೃತಿ ಅಭಿಯಾನ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರಲ್ಲಿ ತಮ್ಮ ಹಕ್ಕು ಚಲಾಯಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಲು, ಶನಿವಾರ ಬೆಳಿಗ್ಗೆ ಲಾಲ್‌ಬಾಗ್‌ನಲ್ಲಿ ವಾಕಥಾನ್ ಮತ್ತು ಬೀದಿ ನಾಟಕಗಳನ್ನು ನಡೆಸಲಾಯಿತು.

ಬಸವ ಜಯಂತಿಯ ಲಾಭ ಪಡೆಯಲು ಮುಂದಾದ ಬಿಜೆಪಿ, ಕಾಂಗ್ರೆಸ್; ವೀರಶೈವ-ಲಿಂಗಾಯತ ಮತಬ್ಯಾಂಕ್ ಓಲೈಸಲು ತಂತ್ರ
ಆರಂಭದಲ್ಲಿ, ಪ್ರಬಲ ವೀರಶೈವ-ಲಿಂಗಾಯತ ಸಮುದಾಯವನ್ನು ತಮ್ಮ ಪರವಾಗಿ ಒಲಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಭಾನುವಾರದಂದು ಬಸವ ಜಯಂತಿಯನ್ನು ವಿಶೇಷ ಕಾರ್ಯಕ್ರಮವನ್ನಾಗಿ ಮಾಡಲು ನಿರ್ಧರಿಸಿವೆ.

ಕರ್ನಾಟಕ ವಿಧಾನಸಭೆ ಚುನಾವಣೆ: ₹ 7 ಕೋಟಿಗೂ ಅಧಿಕ ಮೌಲ್ಯದ ಸ್ಥಿರಾಸ್ತಿ ಘೋಷಿಸಿದ ‘ಬರಿಗಾಲಿನ’ ಬಿಜೆಪಿ ಅಭ್ಯರ್ಥಿ
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಕಳೆದ 20 ವರ್ಷಗಳಿಂದ ಬರಿಗಾಲಿನಲ್ಲಿ ನಡೆಯುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು ಸರಳ ರಾಜಕಾರಣಿ ಎಂದೇ ಕರೆಯುತ್ತಾರೆ.

ವಿಧಾನಸಭೆ ಚುನಾವಣೆ: ಕಾಂಗ್ರೆಸ್, ಎಎಪಿ ಅಭ್ಯರ್ಥಿಗಳ ಆಕ್ಷೇಪಣೆ ಹೊರತಾಗಿಯೂ ಬಿಜೆಪಿಯ ರತ್ನಾ ಮಾಮನಿ ನಾಮಪತ್ರ ಅಂಗೀಕಾರ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ.

ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದುರನ್ನು ಕ್ಷೇತ್ರದತ್ತ ಕರೆತಂದ ಸೋಮಣ್ಣ: ಬಿಜೆಪಿ ಪ್ರಚಾರ ತಂತ್ರ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ತಿಂಗಳು ಬಾಕಿ ಉಳಿದಿದ್ದು, ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿಯ ಹಿರಿಯ ಸಚಿವ ವಿ. ಸೋಮಣ್ಣ ಅವರ ನಡುವಿನ ಪೈಪೋಟಿ ತೀವ್ರಗೊಂಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 10 ನಾಮಪತ್ರ ತಿರಸ್ಕೃತ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶುಕ್ರವಾರ ನಡೆದ ನಾಮಪತ್ರಗಳ ಪರಿಶೀಲನೆಯ ನಂತರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಮತ್ತು ಉಡುಪಿಯಲ್ಲಿ ಮೂರು ನಾಮಪತ್ರಗಳು ತಿರಸ್ಕೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್ ಸಿಪಿ ಕರ್ನಾಟಕ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅಜಿತ್ ಪವಾರ್ ಔಟ್
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಶುಕ್ರವಾರ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಅಜಿತ್ ಪವಾರ್ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಲಿಂಗಾಯತ ಮತಗಳ ಮೇಲೆ ಕಾಂಗ್ರೆಸ್ ಕಣ್ಣು; ಕೂಡಲ ಸಂಗಮದ ಬಸವ ಜಯಂತಿ ಆಚರಣೆಯಲ್ಲಿ ರಾಹುಲ್ ಗಾಂಧಿ ಭಾಗಿ
ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಲಿಂಗಾಯತ ಸಮುದಾಯದ ಮತದಾರರನ್ನು ತನ್ನತ್ತ ಸೆಳೆಯಲು ಮುಂದಾಗಿರುವ ಕಾಂಗ್ರೆಸ್, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ರಾಹುಲ್ ಗಾಂಧಿಯನ್ನು ಕರೆತರಲಿದೆ.

ನನ್ನ ಆಸ್ತಿ ದಾಖಲೆಗಳನ್ನು ಐದು ಸಾವಿರ ಜನ ಡೌನ್‌ಲೋಡ್ ಮಾಡಿದ್ದಾರೆ, ಇದು ಬಿಜೆಪಿ ಪಿತೂರಿ: ಡಿಕೆ ಶಿವಕುಮಾರ್
ನನ್ನ ಆಸ್ತಿ ಘೋಷಣೆ ದಾಖಲೆಗಳನ್ನು 5,000 ಜನರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ ಮತ್ತು ಇದರ ಹಿಂದೆ ಬಿಜೆಪಿ ಷಡ್ಯಂತ್ರವಿದ್ದು, ಪಿತೂರಿ ಮಾಡಬಹುದು. ಅವರು ಏನು ಮಾಡುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ ಎಂದು ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

