Karnataka Assembly Elections

ಬಿಜೆಪಿಯಲ್ಲಿ 'ಬಂಡಾಯ'ದ ಬಿರುಗಾಳಿ: ಶೀಘ್ರವೇ ಭಿನ್ನಮತ ಶಮನ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಅತೃಪ್ತರಾಗಿರುವ ನಾಯಕರನ್ನು ಮನವೊಲಿಸುವ ಪ್ರಯತ್ನದಲ್ಲಿ ಬಿಜೆಪಿಯ ಹಿರಿಯ ನಾಯಕರು ತೊಡಗಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಶಮನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಗುರುವಾಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರ ಪ್ರಚಾರ ಮತದಾರರ ಮೇಲೆ ಪರಿಣಾಮ ಬೀರುತ್ತದೆ: ಪಕ್ಷಗಳಿಗೆ ಪ್ರಚಾರ ಸಾಮಗ್ರಿ ಒದಗಿಸುವ ವ್ಯಾಪಾರಿಗಳು
ರಾಜಕೀಯ ಪಕ್ಷಗಳಿಗೆ ಬಾವುಟಗಳು, ಕ್ಯಾಪ್, ಬಟ್ಟೆ ಬಂಟಿಂಗ್ಸ್, ಬ್ಯಾನರ್, ಶಾಲು, ಟೀ ಶರ್ಟ್, ಬ್ಯಾಡ್ಜ್, ಹೆಡ್ ಮತ್ತು ಹ್ಯಾಂಡ್ ಬ್ಯಾಂಡ್, ಟವೆಲ್ ಮತ್ತಿತರ ಚುನಾವಣಾ ಸಾಮಗ್ರಿಗಳನ್ನು ಪೂರೈಸುವ ಸಗಟು ವ್ಯಾಪಾರಿಗಳು, ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿರುವುದರಿಂದ ಮತ್ತು ಪ್ರಚಾರಗಳನ್ನು ಆರಂಭಿಸುತ್ತಿರುವುದರಿಂದ ಬಿರುಸಿನ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಸಭೆ, ನಾಳೆ ಪಟ್ಟಿ ಸಾಧ್ಯತೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಉಳಿದ 35 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಸಭೆ ನಡೆಸಿದರು. ಮೂಲಗಳ ಪ್ರಕಾರ, ಉಳಿದ ಸೀಟುಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿವಿಜಿಲ್ ಆ್ಯಪ್‌ನಲ್ಲಿ 460 ದೂರು, ಸೆಂಟ್ರಲ್ ಬೆಂಗಳೂರಿನಲ್ಲೇ ಅಧಿಕ
ಬೆಂಗಳೂರಿನಲ್ಲಿ ಏಪ್ರಿಲ್ 11ರವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಿವಿಜಿಲ್ ಆ್ಯಪ್‌ನಲ್ಲಿ 460 ದೂರುಗಳನ್ನು ದಾಖಲಾಗಿವೆ. ಅಲ್ಲದೆ, ಮಂಗಳವಾರದವರೆಗೆ 1,018 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಹೈಕಮಾಂಡ್ ಆದೇಶ ಪಾಲಿಸುತ್ತೇನೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಗುಜರಾತ್ ಮಾದರಿ ಅನುಸರಿಸಿಲ್ಲ: ಕೆಎಸ್ ಈಶ್ವರಪ್ಪ
ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪಕ್ಷದ ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದು ಬುಧವಾರ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: 28 ಅಭ್ಯರ್ಥಿಗಳಿರುವ 3ನೇ ಪಟ್ಟಿ ಪ್ರಕಟಿಸಿದ ಎಎಪಿ
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಎಎಪಿಯ ಕರ್ನಾಟಕ ಘಟಕವು ಸೋಮವಾರ ಪ್ರಕಟಿಸಿದೆ. ಈ ಪಟ್ಟಿಯಲ್ಲಿ 28 ಹೆಸರುಗಳಿವೆ ಮತ್ತು ಎಲ್ಲಾ ಅಭ್ಯರ್ಥಿಗಳು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ಸಿಇಸಿ ಸಭೆ, ರಾಹುಲ್ ಗಾಂಧಿ ಹಾಜರು
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಉಳಿದಿರುವ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಸಿದರು.

ರಾಜ್ಯದಲ್ಲಿನ ಬಿಜೆಪಿ ದುರಾಡಳಿತಕ್ಕೆ ಕಾಂಗ್ರೆಸ್ ಪರ್ಯಾಯ: ಶಶಿ ತರೂರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್, ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿನ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ ಎಂದು ಹೇಳಿದರು.

ಕೋವಿಡ್-ಇನ್‌ಫ್ಲೂಯೆಂಜಾ ಪ್ರಕರಣಗಳ ಏರಿಕೆ; ಚುನಾವಣಾ ರ‍್ಯಾಲಿಗಳು ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ; ಆರೋಗ್ಯ ಇಲಾಖೆ
ಕರ್ನಾಟಕವು ಕೋವಿಡ್ ಮತ್ತು ಇನ್‌ಫ್ಲೂಯೆಂಜಾ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಈ ಉಲ್ಬಣವು ಆರೋಗ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ.

