Karnataka Assembly Elections

ಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯದವರಾಗಿದ್ದು ಗುಜರಾತ್‌ನಲ್ಲಿ ತಪ್ಪದೇ ಮತದಾನ ಮಾಡಿದ ಅನುಭವಿ ನೀಡಿದ ಸಲಹೆ
96 ವರ್ಷದ ಅವರು, 17 ಲೋಕಸಭೆ ಚುನಾವಣೆಗಳಲ್ಲಿ ಮತ್ತು 1952ರಿಂದ ಹಲವಾರು ಇತರ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದಾರೆ. ಗುಜರಾತ್ ಸರ್ಕಾರದ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿ ನಿವೃತ್ತರಾದ ಸುಬ್ರಹ್ಮಣ್ಯಂ ಅವರು ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ: ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ, ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ
ಗುರುವಾರ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ ನಂತರ ಮತ್ತು ಹೊಸ ಮುಖಗಳನ್ನು ಆಯ್ಕೆ ಮಾಡಿದ್ದರಿಂದ ಭಿನ್ನಾಭಿಪ್ರಾಯದ ಧ್ವನಿಗಳು ಇದೀಗ ಜೋರಾಗಿ ಕೇಳಿಸುತ್ತಿವೆ. ಪಕ್ಷದ ಪದಾಧಿಕಾರಿಗಳು ಅಸಮಾಧಾನಗೊಂಡಿದ್ದರೂ, ಕೇಂದ್ರ ಚುನಾವಣಾ ಸಮಿತಿ ಮತ್ತು ಸ್ಕ್ರೀನಿಂಗ್ ಕಮಿಟಿಯ ನೇತೃತ್ವ ವಹಿಸಿದ್ದವರು, ಖಾಸಗಿ ಏಜೆನ್ಸಿಯು ನೀಡಿದ ಸಮೀಕ್ಷೆಯ ವರದಿಯನ್ನು

ವಿಧಾನಸಭೆ ಚುನಾವಣೆ: ಚುನಾವಣಾ ರಾಜಕೀಯದಿಂದ ನಿವೃತ್ತಿ, ಮಕ್ಕಳ ವೃತ್ತಿಜೀವನದತ್ತ ಬಿಜೆಪಿ ಹಿರಿಯ ನಾಯಕರ ಚಿತ್ತ!
ವಂಶ ರಾಜಕಾರಣಕ್ಕೆ ತಿರುವು ನೀಡುವಂತೆ, ರಾಜ್ಯದ ಕರ್ನಾಟಕದ ಕೆಲವು ಹಿರಿಯ ಬಿಜೆಪಿ ನಾಯಕರು ಮುಖ್ಯವಾಹಿನಿಯ ರಾಜಕೀಯದಲ್ಲಿ ತಮ್ಮ ಮಕ್ಕಳ ವೃತ್ತಿಜೀವನವನ್ನು ನಿರ್ಮಿಸುವ ಪ್ರಯತ್ನದಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪುತ್ರರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೇಳಿದ್ದಾರೆ.

ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ: ನಟನ ಸಿನಿಮಾಗಳ ಪ್ರಸಾರ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.

ದಕ್ಷಿಣ ಕನ್ನಡ: ಅಪರಿಚಿತ ಮಹಿಳೆಯೊಂದಿಗಿರುವ ಬಿಜೆಪಿ ಶಾಸಕರ ಖಾಸಗಿ ಫೋಟೊಗಳು ವೈರಲ್!
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಒಂದು ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಶಾಸಕರೊಬ್ಬರು ಅಪರಿಚಿತ ಮಹಿಳೆಯೊಂದಿಗೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ; ನಟ ಪ್ರಕಾಶ್ ರಾಜ್ ಟಾಂಗ್ ಕೊಟ್ಟು ಹೇಳಿದ್ದೇನು?
ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆಯು ಪ್ರಜಾಪ್ರಭುತ್ವದ ಪ್ರಕ್ರಿಯೆ, ನಾನು ಆಕಾಂಕ್ಷಿಯಷ್ಟೆ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರು ಮಾತನಾಡಿದ್ದು, ತಾವು ಮತ್ತು ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಚುನಾಯಿತ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದರು.

ಚುನಾವಣೆಯಲ್ಲಿ ಗೆಲ್ಲಬಲ್ಲ ಪ್ರಬಲ ಅಭ್ಯರ್ಥಿಗಳನ್ನು ಮಾತ್ರ ಸಮಿತಿ ಪರಿಗಣಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ
ಸಭೆಗೂ ಮುನ್ನ ಮಾತನಾಡಿದ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ‘ಚುನಾವಣೆಯಲ್ಲಿ ಗೆಲ್ಲುವ ಹಾಗೂ ಎದುರಾಳಿಗೆ ಸಾಕಷ್ಟು ಪೈಪೋಟಿ ನೀಡುವ ಬಲಿಷ್ಠ ಅಭ್ಯರ್ಥಿಗಳ ಹೆಸರನ್ನು ಸಮಿತಿ ಪರಿಗಣಿಸಲಿದೆ. ಸಮಿತಿಯು ಅಭ್ಯರ್ಥಿಗಳ ಹೆಸರುಗಳ ಬಗ್ಗೆ ಒಮ್ಮತಕ್ಕೆ ಆದ್ಯತೆ ನೀಡುತ್ತದೆ' ಎಂದು ತಿಳಿಸಿದರು.

ರಾಹುಲ್ ಗಾಂಧಿ ಅನರ್ಹತೆ: ಕಾಂಗ್ರೆಸ್‌ಗೆ ಪ್ರಚಾರದ ವಿಷಯ; ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕೊಡುಗೆ ನೀಡುತ್ತದೆ- ವೀರಪ್ಪ ಮೊಯ್ಲಿ
ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪ್ರಚಾರದ ವಿಷಯವಾಗಲಿದೆ ಮತ್ತು ಇದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕೊಡುಗೆ ನೀಡುತ್ತದೆ ಎಂದು ಪಕ್ಷದ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸೋಮವಾರ ಹೇಳಿದ್ದಾರೆ.

