Karnataka Assembly Elections

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ; ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕೇಸರಿ ಪಾಳಯ ಚಿಂತನೆ
ಶತಾಯಗತಾಯ ಗೆಲ್ಲಬೇಕು ಎಂದುಕೊಂಡಿರುವ ಬಿಜೆಪಿ, ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕಾರಣಕ್ಕೆ ಕರೆತರಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಶತಾಯಗತಾಯ ಅಧಿಕಾರಕ್ಕೇರಲು ಗುಜರಾತ್ ತಂತ್ರಗಾರಿಕೆ ಅಳವಡಿಕೆಗೆ ಬಿಜೆಪಿ ಮುಂದು
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ, ಬಿಜೆಪಿ ಪ್ರಚಾರದಲ್ಲಿ ಎಲ್ಲಾ ರಾಜ್ಯಗಳ ನಾಯಕರನ್ನು ಕಣಕ್ಕೆ ಇಳಿಸುವ ಗುಜರಾತ್ ಚುನಾವಣೆಯ ಸಮಯದಲ್ಲಿ ಬಳಸಿದ ಅದೇ ತಂತ್ರವನ್ನು ಅಳವಡಿಸಿಕೊಳ್ಳಲು ಎದುರು ನೋಡುತ್ತಿದೆ.

ಏಪ್ರಿಲ್ 4 ಸಭೆಯ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 4 ರಂದು ಪಕ್ಷದ ನಿರ್ಣಾಯಕ ಸಭೆಯ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಹಣದ ಹರಿವನ್ನು ಪರೀಕ್ಷಿಸಲು ಅಂತರರಾಜ್ಯ ಗಡಿಯಲ್ಲಿ ಕಟ್ಟೆಚ್ಚರ
ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕಕ್ಕೆ ಹಣದ ಹರಿವು ಮತ್ತು ಉಚಿತ ಕೊಡುಗೆಗಳನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ: ಬಿಜೆಪಿಯನ್ನು ಸೋಲಿಸುವಂತೆ ಟೋಲ್ ಗೇಟ್ ವಿರೋಧಿ ಸಮಿತಿ ಮನವಿ
ಟೋಲ್ ಗೇಟ್ ವಿರೋಧಿ ಕ್ರಿಯಾ ಸಮಿತಿಯು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿರುವ ಬಿಜೆಪಿಯನ್ನು ಸೋಲಿಸುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳ ಮತದಾರರಿಗೆ ಮನವಿ ಮಾಡಿದೆ.

ಮಾದರಿ ಸಂಹಿತೆ ಉಲ್ಲಂಘನೆ: ಪರಸ್ಪರರ ವಿರುದ್ಧ ಕಾಂಗ್ರೆಸ್, ಬಿಜೆಪಿ ದೂರು ದಾಖಲು
ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿವೆ.

ಜೆಡಿಎಸ್‌ನಲ್ಲಿ ಅಂತ್ಯ ಕಾಣದ ಕುಟುಂಬ ಕಲಹ; ಬಿಜೆಪಿ-ಕಾಂಗ್ರೆಸ್ ರಾಷ್ಟ್ರೀಯ ನಾಯಕರು ನನ್ನ ಸಂಪರ್ಕದಲ್ಲಿ: ಎಚ್‌ಡಿಕೆ
ರಾಷ್ಟ್ರೀಯ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ನಿವಾರಿಸಿ ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶವನ್ನು ರವಾನಿಸುತ್ತಿರುವ ಸಮಯದಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಕೌಟುಂಬಿಕ ಕಲಹವಿನ್ನೂ ಜೆಡಿಎಸ್ ಪಕ್ಷವನ್ನು ಕಾಡುತ್ತಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್, ಬಿಜೆಪಿಗೆ ಬೆಂಗಳೂರು ಬಿಡಿಸಲಾರದ ಒಗಟು, ಮೂಲ-ವಲಸಿಗರ ನಡುವೆ ಕಾದಾಟ
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಅಧಿಕಾರದ ಕೀಲಿಕೈ ರಾಜಧಾನಿಯಲ್ಲಿದೆ ಎಂಬುದು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ಗೆ ತಿಳಿದಿದೆ. ಮೂಲ ಮತ್ತು ಹೊರಗಿನವರ ಜಗಳದಿಂದ ನಲುಗಿರುವ ಉಭಯ ಪಕ್ಷಗಳು ಕರ್ನಾಟಕದಲ್ಲಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಬೆಂಗಳೂರನ್ನು ವಶಪಡಿಸಿಕೊಳ್ಳಲು ಶ್ರಮಿಸುತ್ತಿವೆ.

ಪಕ್ಷ ಸೇರುವಂತೆ ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ, ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

