Karnataka Assembly Elections

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳ ಒಡಕು; ಅಹಿಂದ ಒಗ್ಗಟ್ಟಿನಿಂದ ಕಾಂಗ್ರೆಸ್‌ಗೆ ಭರ್ಜರಿ ಬಹುಮತ!
ಒಕ್ಕಲಿಗ ಸಮುದಾಯದ ಮತಬ್ಯಾಂಕ್ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಮೂರು ಪಕ್ಷಗಳಿಂದ ರಣಾಂಗಣವಾಗಿ ಮಾರ್ಪಟ್ಟಿದ್ದ ಹಳೇ ಮೈಸೂರು ಭಾಗದಲ್ಲಿ ನಡೆದ ಪೈಪೋಟಿಯಲ್ಲಿ ಕಾಂಗ್ರೆಸ್ ಅನಾಯಾಸವಾಗಿ ಗೆಲುವು ಸಾಧಿಸಿದೆ. 2013 ಮತ್ತು 1999 ರಲ್ಲಿ ಆಗಿನ ಕೆಪಿಸಿಸಿ ಮುಖ್ಯಸ್ಥ ಎಸ್‌ಎಂ ಕೃಷ್ಣ ನೇತೃತ್ವದಲ್ಲಿ ಪಕ್ಷ ಮಾಡಿದ ಸಾಧನೆಯನ್ನು ಇದೀಗ ಪುನರಾವರ್ತಿಸಿದೆ.

ಕೆಲಸ ಮಾಡದ ಅನಿತಾ ಕುಮಾರಸ್ವಾಮಿ, ನಿಖಿಲ್ ಮೇಲೆ ಮತದಾರರ ಮುನಿಸು, ಜೆಡಿಎಸ್ ಮತ ಸೆಳೆದ ಬಿಜೆಪಿ!
ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿಸಿಕೊಂಡಿದ್ದ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರರಲ್ಲಿ ಸೋತಿದೆ. ಸೋತವರಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡರ ಮೊಮ್ಮಗ ನಟ ನಿಖಿಲ್ ಕುಮಾರಸ್ವಾಮಿ ಕೂಡ ಇದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿಜಯ ಸಾಧಿಸಿದ್ದಾರೆ.

ಕಿಂಗ್ ಮೇಕರ್ ಆಗಿ ರಾಜ್ಯದ ಗದ್ದುಗೆ ಏರುವ ಕನಸು ಕಂಡಿದ್ದ ಜೆಡಿಎಸ್‌ಗೆ ವಿಧಾನಸೌಧದಿಂದಲೇ ಗೇಟ್ ಪಾಸ್?
ವಿಧಾನಸಭೆ ಚುನಾವಣೆಯಲ್ಲಿ ಶೇ 10ಕ್ಕಿಂತ ಕಡಿಮೆ ಸ್ಥಾನಗಳನ್ನು ಗಳಿಸುವ ಮೂಲಕ ಕಳಪೆ ಪ್ರದರ್ಶನ ತೋರಿದ ಜೆಡಿಎಸ್‌ಗೆ ವಿಧಾನಸೌಧದಲ್ಲಿ ಕಚೇರಿ ಲಭ್ಯವಾಗುವುದು ಕಷ್ಟ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಈ ಬಾರಿ ಜೆಡಿಎಸ್‌ಗೆ ಅಧಿಕೃತ ಪಕ್ಷದ ಮಾನ್ಯತೆ ಸಿಗುವ ಸಾಧ್ಯತೆ ಇಲ್ಲ.

ಲಿಂಗಾಯತ ಸಮುದಾಯದ ಎಫೆಕ್ಟ್: ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ
ಉತ್ತರ ಕರ್ನಾಟಕದ ಲಿಂಗಾಯತ ಸಮಾಜದ ಕಟ್ಟಾ ನಾಯಕ ಜಗದೀಶ ಶೆಟ್ಟರ್ ಅವರು ತಮ್ಮ ತವರು ಕ್ಷೇತ್ರ ಹುಬ್ಬಳ್ಳಿ-ಧಾರವಾಡದಲ್ಲಿ ಹಿನ್ನಡೆ ಅನುಭವಿಸುತ್ತಿರುವಾಗಲೇ, ಬಿಜೆಪಿ ಕೂಡ ತನ್ನ ಭದ್ರಕೋಟೆಯಾದ ಉತ್ತರ ಕರ್ನಾಟಕದಲ್ಲಿ ಭಾರಿ ಹಿನ್ನೆಡೆ ಅನುಭವಿಸುತ್ತಿದೆ.

ಕರ್ನಾಟಕ ಚುನಾವಣೆ ಫಲಿತಾಂಶ: ಬಿರುಸಿನ ಮತ ಎಣಿಕೆ; ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ, ಕಾಂಗ್ರೆಸ್ ಪೈಪೋಟಿ
ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ರಾಜ್ಯದಾದ್ಯಂತ ಆಡಳಿತಾರೂಢ ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೂಡ ತೀವ್ರ ಪೈಪೋಟಿ ನೀಡುತ್ತಿದೆ.

ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳಾಗುತ್ತವೆ: ಬಿಜೆಪಿ ನಾಯಕ ಬಿಎಲ್ ಸಂತೋಷ್
ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳಾಗುತ್ತವೆ. ಈ ಹಿಂದೆಯೂ ಅವು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಊಹಿಸಿರಲಿಲ್ಲ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗುರುವಾರ ಹೇಳಿದ್ದಾರೆ.

ಬಿಜೆಪಿ 120 ರಿಂದ 125 ಸೀಟು ಗೆಲ್ಲುವುದರಿಂದ ಆಪರೇಷನ್ ಕಮಲ ಮಾಡುವ ಪರಿಸ್ಥಿತಿ ಬರುವುದಿಲ್ಲ: ಶೋಭಾ ಕರಂದ್ಲಾಜೆ
‘ಆಪರೇಷನ್ ಕಮಲ’ದ ಸಾಧ್ಯತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 120 ರಿಂದ 125 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಗುರುವಾರ ಹೇಳಿದ್ದಾರೆ.

ಬಹುತೇಕ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಸುಳಿವು; ಸರ್ಕಾರ ರಚನೆಗೆ ತೆರೆಮರೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಸರತ್ತು!
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಸರತ್ತು ಆರಂಭಿಸಿವೆ.

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಫಲಿತಾಂಶ; ಚುನಾವಣಾ ಪ್ರಚಾರ ತಂತ್ರ ರೂಪಿಸಿದ ಪ್ರಮುಖ ನಾಯಕರಿವರು
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಬುಧವಾರ ಮತದಾನ ಮುಕ್ತಾಯವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಉತ್ಸಾಹದ ಪ್ರಚಾರ ನಡೆಸಿದ ಐವರು ನಾಯಕರು ಇವರಾಗಿದ್ದಾರೆ.

