Karnataka Assembly Elections

ಮತದಾನ ಮುಕ್ತಾಯ: ಮತದಾರರಿಗೆ ರಾಹುಲ್ ಗಾಂಧಿ ಧನ್ಯವಾದ, 'ಉತ್ತಮ' ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕರಿಗೆ ಶ್ಲಾಘನೆ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬುಧವಾರ ಸಂಜೆ ಮತದಾನ ಮುಕ್ತಾಯವಾಗುತ್ತಿದ್ದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಹುಟ್ಟೂರಿನ ಅಭಿವೃದ್ಧಿ; ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣರನ್ನು ಶ್ಲಾಘಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ
ಕರ್ನಾಟಕ ವಿಧಾನಸಭೆಗೆ ಮತದಾನದ ವೇಳೆ ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಬುಧವಾರ ತಮ್ಮ ಹುಟ್ಟೂರು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಮತ ಚಲಾಯಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್‌ವುಡ್ ತಾರೆಯರಿಂದ ಮತದಾನ
ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್‌ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.

ಕರ್ನಾಟಕ ವಿಧಾನಸಭೆ ಚುನಾವಣೆ: ಸಂಜೆ 5 ಗಂಟೆವರೆಗೆ ಶೇ 65.69 ರಷ್ಟು ಮತದಾನ, ಮತ್ತೆ ರಾಮನಗರದಲ್ಲಿ ಅತಿಹೆಚ್ಚು!
224 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ. ಸಂಜೆ 5 ಗಂಟೆಯವರೆಗೆ ಶೇ 65.69 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಮಧ್ಯಾಹ್ನ 3 ಗಂಟೆವರೆಗೆ ಶೇ 52.18 ರಷ್ಟು ಮತದಾನ, ರಾಮನಗರದಲ್ಲಿ ಅತಿಹೆಚ್ಚು!
224 ಸ್ಥಾನಗಳಿಗೆ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ 52.18ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕದ ಮತದಾರರು 'ದ್ವೇಷ'ವನ್ನು ತಿರಸ್ಕರಿಸಿ, 'ಅಭಿವೃದ್ಧಿಗೆ' ಮತ ನೀಡಿ; ತೆಲಂಗಾಣದ ಮುಖ್ಯಮಂತ್ರಿ ಪುತ್ರಿ ಮನವಿ
ಕರ್ನಾಟಕದ ಮತದಾರರು ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಮತ ಚಲಾಯಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಅವರು ಬುಧವಾರ ಯಾವುದೇ ಪಕ್ಷವನ್ನು ಉಲ್ಲೇಖಿಸದೆ ಮನವಿ ಮಾಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ: ವದಂತಿಯಿಂದ ವಿಜಯಪುರದ ಮಸಬಿನಾಳ ಗ್ರಾಮದಲ್ಲಿ ಇವಿಎಂ, ವಿವಿಪ್ಯಾಟ್‌ಗಳು ಧ್ವಂಸ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ನಡೆದ ಮತದಾನದ ವೇಳೆ ಕನಿಷ್ಠ ಮೂರು ಸ್ಥಳಗಳಲ್ಲಿ ಹಿಂಸಾತ್ಮಕ ಘಟನೆಗಳು ವರದಿಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಹಣ ಬಲ’ದಿಂದ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ಬಯಸಿದೆ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಜನರಿಗೆ ತೋರಿಸಲು ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲದ ಕಾರಣ ಆಡಳಿತಾರೂಢ ಬಿಜೆಪಿಯು 'ಹಣಬಲ'ದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಬಯಸಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಬಿಜೆಪಿ ಆಯೋಜಿಸಿದ್ದು 9,125 ರ‍್ಯಾಲಿ, 1,377 ರೋಡ್‌ಶೋ
ಆಡಳಿತ ವಿರೋಧಿ ಅಲೆಯನ್ನು ಸೋಲಿಸಿ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೇರುವ ಮೂಲಕ ಇತಿಹಾಸ ಸೃಷ್ಟಿಸಲು ಯತ್ನಿಸುತ್ತಿರುವ ಬಿಜೆಪಿ, ಕೊನೆಯ ಹಂತದ ಚುನಾವಣಾ ಪ್ರಚಾರದವರೆಗೂ ಸರ್ವ ಪ್ರಯತ್ನ ನಡೆಸಿದೆ.

