Karnataka Assembly Elections

ಕರ್ನಾಟಕ ವಿಧಾನಸಭೆ ಚುನಾವಣೆ: ಈ ಪಕ್ಷೇತರರಿಗೆ ಹೆಸರಿನಲ್ಲೇ ಆಟ; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಸಂಕಷ್ಟ!
ರಾಜ್ಯದಲ್ಲಿ ನಾಳೆ ನಡೆಯಲಿರುವ ವಿಧಾನಸಭೆ ಚುನಾವಣೆಯ ಕಣದಲ್ಲಿರುವ ಸ್ಪರ್ಧಿಗಳ ಪಟ್ಟಿಯನ್ನು ಪರಿಶೀಲಿಸಿದಾಗ, ಹಾಲಿ ಶಾಸಕ ಅಥವಾ ಅವರ ಪ್ರಮುಖ ಅಭ್ಯರ್ಥಿಗಳ ಹೆಸರನ್ನು ಹೋಲುವ ಅನೇಕ ಸ್ವತಂತ್ರ ಅಭ್ಯರ್ಥಿಗಳು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ಕಂಡುಬಂದಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮೇ 13ರವರೆಗೆ ಭಾರಿ ಮಳೆ ಮುನ್ಸೂಚನೆ; ಮತದಾನಕ್ಕೆ ಅಡ್ಡಿ ಸಾಧ್ಯತೆ, ಅಭ್ಯರ್ಥಿಗಳಲ್ಲಿ ಆತಂಕ
ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ನಾಳೆ (ಮೇ 10) ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ.

'ವಿಷಸರ್ಪ' ದಿಂದ 'ವಿಷಕನ್ಯೆ' ಮತ್ತು 'ನಾಲಾಯಕ್ ಬೇಟಾ'ವರೆಗೆ; ಕರ್ನಾಟಕ ಚುನಾವಣೆಯಲ್ಲಿ ಚರ್ಚೆಯಾದ ಹೇಳಿಕೆಗಳಿವು...
'ವಿಷಪೂರಿತ ಹಾವು', 'ವಿಷಕನ್ಯೆ' ಮತ್ತು 'ನಾಲಾಯಕ್' ನಂತಹ ಹೇಳಿಕೆಗಳು ಈ ಭಾರಿಯ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಕೇಳಿಬಂದ ಮಾತುಗಳು. ಇವುಗಳನ್ನು ಕೇಳಿದ ಮತದಾರ, ಬುಧವಾರ ತಮ್ಮ ಮತವನ್ನು ಚಲಾಯಿಸಲಿದ್ದಾನೆ.

ಬೆಂಗಳೂರು: ಹೋಟೆಲ್ ತಲುಪಲು ಡೆಲಿವರಿ ಬಾಯ್ ಸ್ಕೂಟರ್‌ನಲ್ಲಿ ರಾಹುಲ್ ಗಾಂಧಿ ಸವಾರಿ; ವಿಡಿಯೋ!
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ತಮ್ಮ ಮೆಗಾ ರೋಡ್ ಶೋ ನಡೆಸಿದರು. ಟ್ರಿನಿಟಿ ಸರ್ಕಲ್‌ನಲ್ಲಿ ರೋಡ್ ಶೋ ಮುಕ್ತಾಯಗೊಂಡ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋಟೆಲ್‌ಗೆ ತಲುಪಲು ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣ ಬೆಳೆಸಿದ್ದಾರೆ.

ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ; ಲೋಕ್ ಪೋಲ್ ಮೆಗಾ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಗೆಲುವಿನ ಮುನ್ಸೂಚನೆ..
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈಬಾರಿ ಯಾವ ಪಕ್ಷ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಮತದಾರರಲ್ಲಿದೆ. ಹೀಗಿರುವಾಗ, ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಾಲಿಗೆ ಸುವರ್ಣಾವಕಾಶ ಎನ್ನುವಂತಾಗಿದೆ.

ಕಾಂಗ್ರೆಸ್ ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ: ಎಚ್‌ಡಿ ಕುಮಾರಸ್ವಾಮಿ
ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ. ಆದರೆ, ಅವರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸುವ ಇರಾದೆ ಇರಲಿಲ್ಲ, ಆದರೆ....: ಸಚಿವ ವಿ ಸೋಮಣ್ಣ
'ನನ್ನ ಮಗ ಡಾ. ಅರುಣ್ ಸೋಮಣ್ಣಗಾಗಿ ಗೋವಿಂದರಾಜನಗರ (ಬೆಂಗಳೂರು) ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸಿದ್ದೆ. ಆದರೆ, ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಿಂದ ಸ್ಪರ್ಧಿಸುವಂತಾಯಿತು. ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯಾವುದೇ ಉದ್ದೇಶ ನನಗಿರಲಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ಸಿದ್ದರಾಮಯ್ಯ, ಡಿಕೆಶಿ ಭವಿಷ್ಯ ಏನಾಗಲಿದೆ?
ಈ ಬಾರಿಯ ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಸುಳಿವು ನೀಡಿದ್ದು, ಕೆಲ ಸಮೀಕ್ಷೆಗಳು ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದಿವೆ. ಹೀಗಿರುವಾಗ, ಭಾನುವಾರ ಸಂಜೆ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿದೆ. ಇದೀಗ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಉತ್ಸಾಹಕ್ಕೆ ಕಾರಣವಾಗಿದೆ.

