Karnataka Assembly Polls 2023

ಸಿದ್ದು ಅಥವಾ ಡಿಕೆಶಿ ಯಾರಾಗ್ತಾರೆ ನೂತನ ಸಿಎಂ? ಇಂದು ಸಂಜೆ ನಿರ್ಧಾರ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ.

ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಕಾನೂನು ಹೋರಾಟಕ್ಕೆ ಸೌಮ್ಯ ರೆಡ್ಡಿ ತೀರ್ಮಾನ
ತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ.

ಗೆಲುವಿನ ಸಂಭ್ರಮದಲ್ಲಿ ರಾಮನಗರದಲ್ಲಿ ರೋಡ್ ಶೋ ನಡೆಸಿದ ಡಿಕೆಶಿ! ವಿಡಿಯೋ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

ಕರ್ನಾಟಕ ಚುನಾವಣೆ: ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ- ರಣದೀಪ್ ಸುರ್ಜೇವಾಲಾ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಾಳೆ ನಡೆಯಲಿರುವ ಮತ ಎಣಿಕೆಯಲ್ಲಿ ಪಕ್ಷ ಬಹುಮತ ಗಳಿಸಲಿದ್ದು, ಹೊಸ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಚುನಾವಣೆ: ಗೆಲ್ಲಬಹುದಾದ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ, ಕಾಂಗ್ರೆಸ್, ಬಿಜೆಪಿ ಪೈಪೋಟಿ
ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಗೆ ವೇದಿಕೆ ಸಿದ್ಧಗೊಂಡಿದ್ದು, ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೆಲ್ಲಬಹುದಾದ ಅಭ್ಯರ್ಥಿಗಳತ್ತ ರಾಷ್ಟ್ರೀಯ ಪಕ್ಷಗಳು ಗಮನ ಹರಿಸುತ್ತಿವೆ.

ಕರ್ನಾಟಕ ಚುನಾವಣೆ: ಬೆಂಗಳೂರಿಗೆ ಬರುವಂತೆ 'ಪಕ್ಷದ ಅಭ್ಯರ್ಥಿ'ಗಳಿಗೆ ಕಾಂಗ್ರೆಸ್ ಸೂಚನೆ
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಅವಕಾಶವಾಗದಂತೆ ಪಕ್ಷದ ಅಭ್ಯರ್ಥಿಗಳು ಬೆಂಗಳೂರಿಗೆ ಆಗಮಿಸಿ ನಿರ್ದಿಷ್ಟ ಸ್ಥಳದಲ್ಲಿ ಉಳಿಯುವಂತೆ ನಿರ್ದೇಶಿಸಿದೆ.

ಬೆಂಗಳೂರು: ವಂಡರ್ ಲಾ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ
ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಅನುಮಾನದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಜಯನಗರ ಕ್ಷೇತ್ರ: ಮುಕ್ತ, ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು ನಗರ ಜಿಲ್ಲೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

