Karnataka Assembly Polls 2023

ಕರ್ನಾಟಕ ಚುನಾವಣೆ: ಒಟ್ಟು 375 ಕೋಟಿ ರೂ. ನಗದು, ವಸ್ತು ವಶ; ಕಳೆದ ಬಾರಿಗಿಂತ 4.5 ಪಟ್ಟು ಹೆಚ್ಚಳ!
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನಾ ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ ಮತ್ತು ದಕ್ಷಿಣ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ಕರ್ನಾಟಕಕ್ಕೆ ಸಾರ್ವಭೌಮತ್ವ: ಸ್ಪಷ್ಟತೆ ಕೋರಿ ಖರ್ಗೆಗೆ ಚುನಾವಣಾ ಆಯೋಗ ಪತ್ರ
ರಾಜ್ಯ ಚುನಾವಣಾ ಪ್ರಚಾರದ ವೇಳೆ ಸೋನಿಯಾ ಗಾಂಧಿ ನೀಡಿದ್ದ ಕರ್ನಾಟಕದ ಸಾರ್ವಭೌಮತ್ವದ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ಗಳನ್ನು ಸರಿಪಡಿಸುವಂತೆ ಹಾಗೂ ಈ ಬಗ್ಗೆ ಸ್ಪಷ್ಟಪಡಿಸುವಂತೆ ಚುನಾವಣಾ ಆಯೋಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದೆ

ಕರ್ನಾಟಕ ಚುನಾವಣೆ: ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ.

ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ, ಕೊನೆಯ ದಿನ ಘಟಾನುಘಟಿ ನಾಯಕರಿಂದ ಭರ್ಜರಿ ಶಕ್ತಿ ಪ್ರದರ್ಶನ!
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬಿದ್ದಿದೆ. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಬಿಜೆಪಿ, ಕಾಂಗ್ರೆಸ್ , ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಅಬ್ಬರದ ರೋಡ್ ಶೋ, ಪ್ರಚಾರ ಸಭೆಗಳ ಮೂಲಕ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದರು.

ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಶೇ.4 ರಿಂದ 6 ರಷ್ಟು ಹೆಚ್ಚಿಸುತ್ತದೆಯೇ? ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು: ಅಮಿತ್ ಶಾ
ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಶೇ. 4 ರಿಂದ 6ಕ್ಕೆ ಹೆಚ್ಚಿಸಲಿದೆಯೇ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ.

ಕರ್ನಾಟಕ ಚುನಾವಣೆ: ಬಿಜೆಪಿಗೆ ಮತ ಹಾಕದಂತೆ ಮತದಾರರಿಗೆ ಮಮತಾ ಬ್ಯಾನರ್ಜಿ ಮನವಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನತೆ ಸ್ಥಿರತೆ ಮತ್ತು ಅಭಿವೃದ್ಧಿಗಾಗಿ ಮತ ಚಲಾಯಿಸಿ, ಬಿಜೆಪಿಗೆ ಮತ ಚಲಾಯಿಸಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ.

ಪ್ರಧಾನಿ ಫೋಟೋ ಮರೆಮಾಚದ ಚುನಾವಣಾ ಆಯೋಗ; ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆಯೇ? ಕಾಂಗ್ರೆಸ್ ಕಿಡಿ
ಚುನಾವಣಾ ಆಯೋಗ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ಪ್ರಧಾನಿ ಫೋಟೋವನ್ನು ಮರೆಮಾಚಿಲ್ಲ. ಇದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ- ಬಿಜೆಪಿ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಡಿಜಿ, ಐಜಿಗೆ ಕಾಂಗ್ರೆಸ್ ದೂರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಕಾಂಗ್ರೆಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.

