Karnataka Assembly Polls 2023

ಸೋನಿಯಾ 'ವಿಷಕನ್ಯೆ': ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ; ಯತ್ನಾಳ್ ಉಚ್ಚಾಟನೆಗೆ ಆಗ್ರಹ
ಸೋನಿಯಾ ಗಾಂಧಿ ಅವರನ್ನು 'ವಿಷಕನ್ಯೆ' ಎಂದು ಕರೆದಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಬಿಜೆಪಿಯನ್ನು ಒತ್ತಾಯಿಸಿದೆ.

ನಾಮಪತ್ರ ವಾಪಸ್ ಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ವಿ ಸೋಮಣ್ಣ ಕರೆ: ಆಡಿಯೋ ವೈರಲ್, ಕಾಂಗ್ರೆಸ್ ಕಿಡಿ
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ (ಆಲೂರು ಮಲ್ಲು) ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಕರೆ ಮಾಡಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಏಪ್ರಿಲ್ 27 ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಮೋದಿ ಸಂವಾದ: ಶೋಭಾ ಕರಂದ್ಲಾಜೆ
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳು 27ರಂದು ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ದಕ್ಷಿಣ ಕಾಶಿ ನಂಜನಗೂಡು ಕ್ಷೇತ್ರ: ಅಭಿವೃದ್ಧಿ ವರ್ಸಸ್ ಅನುಕಂಪದ ಅಲೆ
ಮೈಸೂರು ಜಿಲ್ಲೆಯ ವಿಧಾನಸಭಾ ಚುನಾವಣೆಗಳು ಪಕ್ಷಾತೀತವಾಗಿ ನಡೆದರೆ, ‘ದಕ್ಷಿಣ ಕಾಶಿ’ ನಂಜನಗೂಡಿನಲ್ಲಿ ‘ಅಭಿವೃದ್ಧಿ ವರ್ಸಸ್ ಅನುಕಂಪದ ಮೇಲೆ ಹೋರಾಟ ನಡೆಯುತ್ತಿದೆ.

ಕರಾವಳಿ ಜಿಲ್ಲೆಗಳಲ್ಲಿ 'ಹಿಜಾಬ್' ವಿಷಯ ಚುನಾವಣಾ ಪ್ರಚಾರದಲ್ಲಿ ಪ್ರಮುಖ ಅಂಶ ಅಲ್ಲವೇ ಅಲ್ಲ!
ಕಳೆದ ವರ್ಷ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ 'ಹಿಜಾಬ್ ನಿಷೇಧ' ರಾಷ್ಟ್ರಮಟ್ಟದಲ್ಲಿ ದೊಡ್ಡ ವಿಷಯವಾಗಿತ್ತು. ಆದರೆ, ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಾದಾತ್ಮಕ ಹಿಜಾಬ್ ವಿಚಾರ ಪ್ರಮುಖ ವಿಷಯವಾಗಿ ಕಾಣುತ್ತಿಲ್ಲ.

ರಾಜ್ಯ ಬಿಜೆಪಿ ಸರ್ಕಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ: ಪ್ರಿಯಾಂಕಾ ಗಾಂಧಿ ಆರೋಪ
ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ತಿರಸ್ಕರಿಸಿ: ಮತದಾರರಿಗೆ ಅಮಿತ್ ಶಾ ಕರೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಮತದಾರರನ್ನು ಒತ್ತಾಯಿಸಿದ್ದಾರೆ. ಅಲ್ಲದೇ, ಜಿಲ್ಲೆಯಲ್ಲಿ ಕನಿಷ್ಠ ನಾಲ್ವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಪುಲಿಕೇಶಿನಗರ ಕ್ಷೇತ್ರ: ಏಕೈಕ ಎಐಎಡಿಎಂಕೆ ಅಭ್ಯರ್ಥಿ ನಾಮಪತ್ರ ವಾಪಸ್
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಕಣದಿಂದ ತಮಿಳುನಾಡಿನ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಿಂದೆ ಸರಿದಿದೆ.

ಬಿಜೆಪಿಗರ ಬಾಯಲ್ಲಿ 'ರಾಮನಾಮ' ಜಪ, ಹಾಕುವುದು 40% 'ಪಂಗನಾಮ'- ಕಾಂಗ್ರೆಸ್ ಟೀಕೆ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭ್ರಷ್ಚಾಚಾರ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪ, ವಾಗ್ದಾಳಿಯಲ್ಲಿ ತೊಡಗಿವೆ. ಬಾಯಲ್ಲಿ ರಾಮನಮ ಜಪ ಮಾಡುವ ಬಿಜೆಪಿ ನಾಯಕರು 40% ಕಮಿಷನ್ ಪಡೆದು ಜನರಿಗೆ ವಂಚಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

