Karnataka Assembly Polls 2023

ಕರ್ನಾಟಕ ಚುನಾವಣೆ: ಚುನಾವಣಾ ಆಯೋಗದಿಂದ ಒಟ್ಟು ರೂ. 250 ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ
ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 250 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.

ರಾಜಕೀಯ ಚದುರಂಗದಾಟ:'ಕಿಂಗ್ ಮೇಕರ್' ಲಿಂಗಾಯತ ಸಮುದಾಯ ಒಲೈಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಪೈಪೋಟಿ!
224 ಸದಸ್ಯ ಬಲದ ವಿಧಾನಸಭೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಹಾಗೂ ರಾಜ್ಯದ ಜನಸಂಖ್ಯೆಯ ಶೇ.18ರಷ್ಟಿದ್ದು, ಕಿಂಗ್ ಮೇಕರ್ ಆಗಿರುವ ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿವೆ.

ಕರ್ನಾಟಕ ಚುನಾವಣೆ: ಉತ್ತರ ಕರ್ನಾಟಕ ಹಿಡಿತ ಉಳಿಸಿಕೊಳ್ಳಲು ಬಿಜೆಪಿಗೆ ಕಠಿಣ ಪರಿಸ್ಥಿತಿ!
2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಕೇಸರಿ ಪಕ್ಷಗಳ ಪ್ರಯೋಗಗಳಿಗೆ ಈ ಭಾಗದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಕರ್ನಾಟಕ ಚುನಾವಣೆ: ಕಾಂಗ್ರೆಸ್‌ಗೆ ಸಿಪಿಐ ಬೆಂಬಲ ಘೋಷಣೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 215 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ಕಮ್ಯುನಿಸ್ಟ್ ಪಕ್ಷ ನಿರ್ಧರಿಸಿದೆ. ಸಿಪಿಐ ಈಗಾಗಲೇ ಚುನಾವಣೆಗೆ ಏಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ,

ಶಿವಮೊಗ್ಗ ಕ್ಷೇತ್ರ: ಈಶ್ವರಪ್ಪಗೆ ಟಿಕೆಟ್ ನಿರಾಕರಿಸುವ ಮೂಲಕ ತೀವ್ರ ಹಣಾಹಣಿ ಕ್ಷೇತ್ರವನ್ನಾಗಿ ಮಾಡಿದ ಬಿಜೆಪಿ!
ಸರಣಿ ಕೋಮು ಸಂಘರ್ಷ ಘಟನೆಗಳಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಶಿವಮೊಗ್ಗ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿದೆ.

ಅಭ್ಯರ್ಥಿಗಳಿಗೆ ಬಿ-ಫಾರಂ ಕೊಡಲು ಹಣ ವಸೂಲಿ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.

ಲಿಂಗಾಯತ ಧರ್ಮ ಒಡೆಯುವ ಮತ್ತೊಂದು ಹುನ್ನಾರ ಡಿಕೆಶಿ ಹೇಳಿಕೆಯಿಂದ ಬಯಲು: ಸಿಎಂ ಬೊಮ್ಮಾಯಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಮಾತಿನ ಸಮರವೂ ಜೋರಾಗಿದೆ. ಕೆಲವು ಬಿಜೆಪಿಯ ಲಿಂಗಾಯತ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿರುವುದನ್ನು ಡ್ಯಾಂಗೆ ಹೋಲಿಸಿ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಕರ್ನಾಟಕ ಚುನಾವಣೆ: 'ಹಿಂದೂತ್ವ ಕಾರ್ಡ್' ಪ್ರಯೋಗಿಸಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಪ್ರಚಾರದ ಅಖಾಡ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ವಾಕ್ಸಮರ, ಆರೋಪ, ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಜೋರಾಗುತ್ತಿದೆ.

ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಕಾಂಗ್ರೆಸ್ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಮುಖಂಡರ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.

