Karnataka Assembly Polls 2023

ಕರ್ನಾಟಕ ಚುನಾವಣೆ: ಅಮಿತ್ ಶಾ ನಾಳೆ ಬೆಂಗಳೂರು ಭೇಟಿ, ದೇವನಹಳ್ಳಿಯಲ್ಲಿ ರೋಡ್ ಶೋ!
ರಾಜಕೀಯ

ಕರ್ನಾಟಕ ಚುನಾವಣೆ: ಅಮಿತ್ ಶಾ ನಾಳೆ ಬೆಂಗಳೂರು ಭೇಟಿ, ದೇವನಹಳ್ಳಿಯಲ್ಲಿ ರೋಡ್ ಶೋ!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಸಿದ್ಧತೆ ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ  ನಾಳೆಯಿಂದ ಎರಡು ದಿನ ಬೆಂಗಳೂರು ಭೇಟಿ ಕೈಗೊಂಡಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಎಲೆಕ್ಷನ್ ವೇಳಾಪಟ್ಟಿ ಪ್ರಕಟವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. 

ಕರ್ನಾಟಕ ವಿಧಾನಸಭೆ ಚುನಾವಣೆ 2023: ಮಂಡ್ಯದಲ್ಲಿ ಬಿಜೆಪಿ ಅರಳುವುದೇ ಅಥವಾ ಸಣ್ಣ ಪಕ್ಷಗಳು ದೊಡ್ಡ ಛಾಪು ಮೂಡಿಸುವುದೇ?
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ 2023: ಮಂಡ್ಯದಲ್ಲಿ ಬಿಜೆಪಿ ಅರಳುವುದೇ ಅಥವಾ ಸಣ್ಣ ಪಕ್ಷಗಳು ದೊಡ್ಡ ಛಾಪು ಮೂಡಿಸುವುದೇ?

ದಕ್ಷಿಣ ಕರ್ನಾಟಕದ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆಯಾಗಿರುವ ನಟಿ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆಯೇ? ಬಿಜೆಪಿ ಬಯಸಿದಲ್ಲಿ ಸ್ಪರ್ಧಿಸುವ ಸುಳಿವನ್ನು ಅವರು ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ
ರಾಜಕೀಯ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಗುರುವಾರ ನಾಮಪತ್ರ ಸಲ್ಲಿಸಿದರು.

ಕರ್ನಾಟಕ ಚುನಾವಣೆ: ಎಎಪಿ 4ನೇ ಪಟ್ಟಿ ಪ್ರಕಟ; 43 ಅಭ್ಯರ್ಥಿಗಳಿಗೆ ಟಿಕೆಟ್
ರಾಜಕೀಯ

ಕರ್ನಾಟಕ ಚುನಾವಣೆ: ಎಎಪಿ 4ನೇ ಪಟ್ಟಿ ಪ್ರಕಟ; 43 ಅಭ್ಯರ್ಥಿಗಳಿಗೆ ಟಿಕೆಟ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗಾಗಿ 45 ಅಭ್ಯರ್ಥಿಗಳನ್ನೊಳಗೊಂಡ ಎಎಪಿ ನಾಲ್ಕನೇ ಪಟ್ಟಿ ಮಂಗಳವಾರ ಬಿಡುಗಡೆಯಾಗಿದೆ. ಇದರೊಂದಿಗೆ ಇಲ್ಲಿಯವರೆಗೂ ಒಟ್ಟಾರೇ 168 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

ರೋಣದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ
ರಾಜಕೀಯ

ರೋಣದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ಚುನಾವಣೆ ಮೂಲಕ ಕರ್ನಾಟಕ ವಿಧಾನಸಭೆ ಪ್ರವೇಶಿಸುವ ಕನಸು ಕಂಡಿದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನಾಲ್ಕನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದೆ.

ವರುಣಾ: ಬಿಜೆಪಿಯ ಹರಕೆಯ ಕುರಿ, ಮನೆ ಮಗನ ನಡುವಿನ ಚುನಾವಣೆ- ಸಿದ್ದರಾಮಯ್ಯ
ರಾಜಕೀಯ

ವರುಣಾ: ಬಿಜೆಪಿಯ ಹರಕೆಯ ಕುರಿ, ಮನೆ ಮಗನ ನಡುವಿನ ಚುನಾವಣೆ- ಸಿದ್ದರಾಮಯ್ಯ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

2024ರ ಲೋಕಸಭೆ ಮೇಲೆ ಕಣ್ಣು: ವಿರೋಧ ಪಕ್ಷಗಳ ನಾಯಕರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಯತ್ನ
ರಾಜಕೀಯ

2024ರ ಲೋಕಸಭೆ ಮೇಲೆ ಕಣ್ಣು: ವಿರೋಧ ಪಕ್ಷಗಳ ನಾಯಕರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಯತ್ನ

ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ ನಾಯಕಿ ಕನ್ನಿಮೋಳಿ ಪ್ರಚಾರ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಇಂತಹ ಪ್ರಯತ್ನ ಮಾಡುತ್ತಿದೆ. 

ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ
ರಾಜಕೀಯ

ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

ಬೆಂಗಳೂರಿನ ಪುಲಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಭಾನುವಾರ ರಾಜೀನಾಮೆ ಸಲ್ಲಿಸಿದರು.

ಗಡಿಯಲ್ಲಿ ವಾಹನಗಳ ತಪಾಸಣೆ: ಟ್ರಾಫಿಕ್ ಜಾಮ್ ನಿಂದ ಕಿರಿಕಿರಿ; ಸಾರ್ವಜನಿಕರು, ಪ್ರವಾಸಿಗರಿಂದ ದೂರು
ರಾಜ್ಯ

ಗಡಿಯಲ್ಲಿ ವಾಹನಗಳ ತಪಾಸಣೆ: ಟ್ರಾಫಿಕ್ ಜಾಮ್ ನಿಂದ ಕಿರಿಕಿರಿ; ಸಾರ್ವಜನಿಕರು, ಪ್ರವಾಸಿಗರಿಂದ ದೂರು

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ನಗದು, ಬೆಲೆಬಾಳುವ ವಸ್ತುಗಳ ಸಾಗಣೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸ್ಥಾಪಿಸಲಾದ ನೂರಾರು ಅಂತರರಾಜ್ಯ ಮತ್ತು ಅಂತರ ಜಿಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆಯಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ.