karnataka bandh

28ರಂದು ಕೆ.ಆರ್. ಮಾರುಕಟ್ಟೆ ಬಂದ್, ಕರ್ನಾಟಕ ಬಂದ್ ಗೆ ಅಣ್ಣಾ ಡಿಎಂಕೆ ಬೆಂಬಲ!
ಇದೇ 28 ರಂದು ಸೋಮವಾರ ಎಲ್ಲಾ ರೈತ ಸಂಘಟಣೆಗಳು 'ಕರ್ನಾಟಕ ಬಂದ್'ಗೆ ಕರೆ ಕೊಟ್ಟಿದ್ದು, ಇದಕ್ಕೆ ತರಕಾರಿ ಮತ್ತು ಹಣ್ಣು ಸಗಟು ವರ್ತಕರ ಸಂಘ ಬೆಂಬಲ ವ್ಯಕ್ತಪಡಿಸಿವೆ.

ರೈತಪರ ಸಂಘಟನೆಗಳಿಂದ ರಾಜ್ಯ ಬಂದ್: ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಮುಂದೂಡಿಕೆ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಸೆಪ್ಟಂಬರ್ 28 ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ ವಿಷಯದ ಪರೀಕ್ಷೆಗಳನ್ನು ಸೆಪ್ಟಂಬರ್ 29ಕ್ಕೆ ಮುಂದೂಡಲಾಗಿದೆ.

ಶುಕ್ರವಾರ ಕರ್ನಾಟಕ ಬಂದ್ ಇಲ್ಲ, ಕೇವಲ ಹೆದ್ದಾರಿ ಮಾತ್ರ ಬಂದ್
ಕರ್ನಾಟಕ ಬಂದ್ ಇರುವುದಿಲ್ಲ ಆದರೆ , ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ಕರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ರೈತ ಸಂಘಟನೆಗಳಿಂದ ಶುಕ್ರವಾರ ಕರ್ನಾಟಕ ಬಂದ್: ನಾಳೆ ತೀರ್ಮಾನ
ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ವಿರೋಧಿಸಿ ವಿವಿಧ ರೈತಪರ, ದಲಿತ, ಕಾರ್ಮಿಕ ಮತ್ತು ಜನರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಲು ಉದ್ದೇಶಿಸಿವೆ.

‘ಕರ್ನಾಟಕ ಬಂದ್’ಗೆ ಮಿಶ್ರ ಪ್ರತಿಕ್ರಿಯೆ, ಕನ್ನಡಪರ ಸಂಘಟನೆಗಳಿಂದ ಸಿಎಂ ಯಡಿಯೂರಪ್ಪ ಭೇಟಿ
ಕೈಗಾರಿಕೆಗಳು ಸೇರಿದಂತೆ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಯಲ್ಲಿ ಸ್ಥಳೀಯರಿಗೆ(ಕನ್ನಡಿಗರು) ಉದ್ಯೋಗ ಮೀಸಲಾತಿ ಒದಗಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಗುರುವಾರ ಕರೆ ನೀಡಿದ್ದ 'ಕರ್ನಾಟಕ ಬಂದ್' ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನೀತಿ ಜಾರಿ: ಬಸವರಾಜ ಬೊಮ್ಮಾಯಿ
ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನದ ಬಗ್ಗೆ ತಾತ್ವಿಕವಾಗಿ ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ವರದಿಯ ಶಿಫಾರಸ್ಸುಗಳನ್ನು ಜಾರಿ ಮಾಡುವ ಬಗ್ಗೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ: ರಾಜ್ಯಾದ್ಯಂತ ಜನಜೀವನ, ವಾಹನ ಸಂಚಾರ ಯಥಾ ಸ್ಥಿತಿ, ಹಲವೆಡೆ ತಿಭಟನೆ
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿದ್ದು, ಜನಜೀವನ ಎಂದಿನಂತಿದೆ.

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ಗೃಹ ಬಂಧನ
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಗುರುವಾರ ರಾಜ್ಯಾದ್ಯಂತ ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲು ಆಗ್ರಹಿಸಿ ಕರ್ನಾಟಕ ಬಂದ್: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕೆಂಬ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ರಾಜ್ಯಾದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

