karnataka bandh

ಒತ್ತಾಯದ ಬಂದ್‌ಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ; ಕಾರ್ಯಕರ್ತರ ಬಂಧನ ವಿರೋಧಿಸಿ ರಾಜಭವನ ಮುತ್ತಿಗೆ: ಕರವೇ ಅಧ್ಯಕ್ಷ ನಾರಾಯಣಗೌಡ
ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.

ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!
ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

Karnataka Bandh: ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್; ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಕನ್ನಡಪರ ಸಂಘಟನೆಗಳ ಆಗ್ರಹ
ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ನಾಡಿನ ಆಸ್ತಿಪಾಸ್ತಿ ಮೇಲೆ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ-MES ) ದಬ್ಬಾಳಿಕೆ ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೊಸ ವರ್ಷ(New year) ಮುನ್ನಾದಿನ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ(Karnataka Bandh) ಕರೆ ನೀಡಿವೆ.

ಕರ್ನಾಟಕ ಬಂದ್ ನಿಂದ ಸಣ್ಣ ವ್ಯಾಪಾರಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಆಗುವ ನಷ್ಟವನ್ನು ಆಯೋಜಕರೇ ಭರಿಸಬೇಕಾಗುತ್ತೆ: ಹೈಕೋರ್ಟ್
ಸಣ್ಣ ವ್ಯಾಪಾರಿಗಳು ಮತ್ತು ರಸ್ತೆ ಬದಿ ವ್ಯಾಪಾರಿಗಳು ಈಗಾಗಲೇ ಕೋವಿಡ್-19 ಸಾಂಕ್ರಾಮಿಕ, ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದು ಶನಿವಾರ ನಡೆಯುವ ಕರ್ನಾಟಕ ಬಂದ್ ನಿಂದ ಉಂಟಾಗುವ ನಷ್ಟವನ್ನು ಆಯೋಜಕರೇ ಭರಿಸುವ ಬಗ್ಗೆ ಪರಿಗಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಬಂದ್ ಬೆನ್ನಲ್ಲೇ 100 ಮಂದಿ ರೌಡಿ ಶೀಟರ್'ಗಳು ಪೊಲೀಸರ ವಶಕ್ಕೆ!
ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟಲ್'ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಭಾಗಶಃ ಬೆಂಬಲ, ಕೆಲವೆಡೆ ಹೋರಾಟಗಾರರ ಬಂಧನ
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರ್ನಾಟಕ ಬಂದ್: ಟೌನ್'ಹಾಲ್ ಬಳಿ ಪೊಲೀಸ್-ಪ್ರತಿಭಟನಾಕಾರರ ನಡುವೆ ವಾಗ್ವಾದ, ಹಲವರನ್ನು ವಶಕ್ಕೆ ಪಡೆದ ಪೊಲೀಸರು
ಮರಾಠ ಸಮುದಾಯ ನಿಗಮ ಸ್ಥಾಪನೆ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಶನಿವಾರ ಆರಂಭಗೊಂಡಿದ್ದು, ಹಲವೆಡೆ ಬಿಎಂಟಿಸಿ ಬಸ್'ಗಳ ಮೇಲೆ ಕಲ್ಲು ತೂರಾಟ ನಡೆದಿದೆ...

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಕರೆ ಹಿನ್ನೆಲೆ: ರಾಜ್ಯಾದ್ಯಂತ ಕಟ್ಟೆಚ್ಚರ
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

