karnataka bandh

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ: ಸುರ್ಜೇವಾಲಾ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ರಾಜ್ಯದಲ್ಲಿ ತೀವ್ರಗೊಂಡ ರೈತರ ಕಿಚ್ಚು: ಏರ್'ಪೋರ್ಟ್ ಗೆ ಮುತ್ತಿಗೆ, ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ಕರ್ನಾಟಕ ಬಂದ್ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ.

ಅವಳಿ ನಗರ ಚಿತ್ರದುರ್ಗ-ದಾವಣಗೆರೆಗಳಲ್ಲಿ ಬಂದ್ ನಿಂದ ಜನ ಜೀವನ ಅಸ್ತವ್ಯಸ್ತ ಸಾಧ್ಯತೆ
ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆ ವಿರೋಧಿಸಿ ರೈತಪರ ಸಂಘಟನೆಗಳು ಹಮ್ಮಿಕೊಂಡಿರುವ ಬಂದ್ ಅವಳಿ ನಗರ ಚಿತ್ರದುರ್ಗ-ದಾವಣಗೆರೆ ಜನತೆಯ ಸಹಜ ಜೀವನದಲ್ಲಿ ವ್ಯತ್ಯಯ ಮೂಡಿಸುವ ಸಾಧ್ಯತೆಯಿದೆ.

ರಾಜ್ಯ ಬಂದ್'ಗೆ ಸರ್ಕಾರದ ಅನುಮತಿ ಇಲ್ಲ: ಸಚಿವ ಆರ್.ಅಶೋಕ್
ಕರ್ನಾಟಕ ಬಂದ್ ಗೆ ಸರ್ಕಾರದ ಯಾವುದೇ ಬೆಂಬಲ ಇಲ್ಲ. ಬಂದ್ ಮಾಡುವುದಕ್ಕೂ ಅವಕಾಶ ಇಲ್ಲ. ಯಥಾವತ್ತಾಗಿ ಸರ್ಕಾರಿ ಕಚೇರಿಗಳು, ಟ್ಯಾಕ್ಸಿ, ಬಸ್ ಗಳು ಇರಲಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದರು.

ಸರ್ಕಾರ ರೈತರ ಪರ ಇದೆ, ಕರ್ನಾಟಕ ಬಂದ್ ಕರೆ ಕೈಬಿಡಲಿ: ರೈತರಿಗೆ ಮುಖ್ಯಮಂತ್ರಿ ಮನವಿ
ರೈತರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಪ್ರತಿಪಕ್ಷಗಳು ಮಾಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು; ಬಲವಂತದ ಬಂದ್ ಗೆ ಅವಕಾಶವಿಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ
ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಕೃಷಿ ಮಸೂದೆ ವಿರೋಧಿಸಿ ಇಂದು ಕರ್ನಾಟಕ ಬಂದ್: ಎಲ್ಲೆಡೆ ಹೆಚ್ಚಿದ ಭದ್ರತೆ, ಸಂಜೆ 6 ಗಂಟೆವರೆಗೆ ವಹಿವಾಟು ಸ್ಥಗಿತ
ರೈತ ಹೋರಾಟ ಲೆಕ್ಕಿಸದೆ ಕೃಷಿ ಮಸೂದೆ, ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್...

ಕರ್ನಾಟಕ ಬಂದ್: ನಾಳೆ ಎಂದಿನಂತೆ ಸರ್ಕಾರಿ ಬಸ್ ಸಂಚಾರ - ಡಿಸಿಎಂ ಲಕ್ಷ್ಮಣ್ ಸವದಿ
ಕೆಲವು ಸಂಘಟನೆಗಳು ನಾಳೆ(ಸೋಮವಾರ)ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೃಷಿ ಮಸೂದೆ ವಿರೋಧಿಸಿ ಬಂದ್: ನಾಳೆ ಏನಿರುತ್ತೆ..? ಏನಿರಲ್ಲ? ಇಲ್ಲಿದೆ ವಿವರ
ಸರ್ಕಾರ ಜಾರಿ ತರಲು ಇಚ್ಛಿಸಿರುವ ಕೃಷಿ ಮಸೂದೆ ವಿಚಾರವಾಗಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವ ರೈತಪರ ಸಂಘಟನೆಗಳು ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ನೀಡಿದ್ದು ನಾಳೆ ರಾಜ್ಯದಲ್ಲಿ ಜನಜೀವನ ಅಸ್ತವಸ್ಥವಾಗುವ ಸಾಧ್ಯತೆ ಇದೆ.

