ರಾಜ್ಯಬೋವಿ ನಿಗಮದ ಮಾಜಿ ಎಂಡಿ, ಸಿಬ್ಬಂದಿಗಳಿಂದ 97 ಕೋಟಿ ರೂಪಾಯಿ ದುರುಪಯೋಗ: ಸಿಐಡಿ ವರದಿ ಸಲ್ಲಿಕೆ
ಕರ್ನಾಟಕ ಬೋವಿ ಅಭಿವೃದ್ಧಿ ನಿಗಮಕ್ಕೆ (KBDC) ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನೀಡಿದ್ದ 97 ಕೋಟಿ ರೂಪಾಯಿಗೂ ಅಧಿಕ ಮೊತ್ತ ಹಣವನ್ನು 500 ಮಂದಿ ಫಲಾನುಭವಿಗಳ ಹೆಸರಿನಲ್ಲಿ ಅಕ್ರಮವಾಗಿ ಬಳಕೆ ಮಾಡಲಾಗಿದೆ ಎಂದು ಅಪರಾಧ ತನಿಖಾ ಇಲಾಖೆ (CID) ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.