Karnataka BJP

ಕರ್ನಾಟಕ ಬಿಜೆಪಿಯಲ್ಲಿ ನಾಯಕರೇ ಇಲ್ಲ, ಪಕ್ಷ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲಿದೆ: ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಬರೋಬ್ಬರಿ ಮೂರು ತಿಂಗಳು ಕಳೆದಿದ್ದರೂ ರಾಜ್ಯ ಬಿಜೆಪಿಗೆ ಮಾತ್ರ ಇಂದಿಗೂ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಇಇದೇ ವಿಚಾರವಾಗಿ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಿಡಿಕಾರಿದ್ದು, ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಬಿಜೆಪಿಯಲ್ಲಿ ನಾಯಕರಿಲ್ಲದಂತಾಗಿದೆ ಎಂದಿದ್ದಾರೆ.

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎಸ್‌ಐಟಿ ತನಿಖೆ ಕೋರಿ ರಾಜ್ಯಪಾಲರ ಭೇಟಿಗೆ ಬಿಜೆಪಿ ಮುಂದು
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಒತ್ತಾಯಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರು ಶುಕ್ರವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ.

ಬಿಜೆಪಿ ಈಗ ಸೂತ್ರ ಕಿತ್ತ ಗಾಳಿಪಟ; ಕಾಂಗ್ರೆಸ್ ನತ್ತ ವಲಸಿಗರ ಚಿತ್ತ (ಸುದ್ದಿ ವಿಶ್ಲೇಷಣೆ)
'ಸೂತ್ರ ಹರಿದ ಗಾಳಿ ಪಟ'…. ರಾಜ್ಯ ಬಿಜೆಪಿಯಲ್ಲಿ ಚುನಾವಣೆ ನಂತರ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಹೀಗೆ ಹೋಲಿಕೆ ಮಾಡುವುದು ಸರಿಯಾದೀತು.

ಬಿಜೆಪಿ ವಿಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ: ಇಂದು ಘೋಷಣೆಯಾಗುವ ಸಾಧ್ಯತೆ; ಬಿಎಸ್ ಯಡಿಯೂರಪ್ಪ
ಬಹು ನಿರೀಕ್ಷಿತ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಸ್ಥಾನಗಳ ಕುರಿತು ಬುಧವಾರದಂದು ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ, ಮುಜುಗರದ ಹೇಳಿಕೆ: 11 ಮಂದಿಗೆ ಬಿಜೆಪಿಯಿಂದ ನೋಟಿಸ್ ಜಾರಿ!
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಹನ್ನೊಂದು ಮಂದಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ. ಇನ್ನು ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ.

ಬಿಜೆಪಿ ಕಿತ್ತಾಟ; ಮುಂದಿದೆಯಾ ಮಹಾ ಸಮರ? (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಅವರ ತಂಡದ ವಿರುದ್ಧ ಸಿಡಿದೆದ್ದಿರುವ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಪಕ್ಷದ ಶಿಸ್ತು ಸಮಿತಿ ನೋಟೀಸ್ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಜಾಗೃತಿ ಅಭಿಯಾನ!
ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ.

ಒಡೆದ ಮನೆ ಬಿಜೆಪಿಯಲ್ಲಿ ನಿಲ್ಲದ ದಾಯಾದಿ ಕಲಹ! (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಮನೆಯೊಂದು ಮೂರು ಬಾಗಿಲು. ಚುನಾವಣಾ ಫಲಿತಾಂಶದ ನಂತರ ರಾಜ್ಯ ಬಿಜೆಪಿ ಎದುರಿಸುತ್ತಿರುವ ಸ್ಥಿತಿ ಇದು. ಗೆದ್ದು ಅಧಿಕಾರಕ್ಕೆ ಬರುವ ಪ್ರಚಂಡ ಆತ್ಮವಿಶ್ವಾಸದಲ್ಲಿದ್ದ ಪಕ್ಷದ ನಾಯಕರಿಗೆ ಸೋಲಿನ ವಾಸ್ತವವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ.

ಕಾಂಗ್ರೆಸ್ ಮೀಸಲಾತಿ ಬದಲಾಯಿಸಿದರೆ ಸುಮ್ಮನೆ ಕೂರುವುದಿಲ್ಲ: ಬಿಜೆಪಿ ನಾಯಕ ಆರ್ ಅಶೋಕ
ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆಯನ್ನು ಅಂಗೀಕರಿಸುವುದಾಗಿ ಮತ್ತು ವರದಿಯ ಆಧಾರದ ಮೇಲೆ ವಿವಿಧ ಸಮುದಾಯಗಳಿಗೆ ಸೌಲಭ್ಯಗಳನ್ನು ಒದಗಿಸುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುವುದು ವಿವಾದಕ್ಕೆ ಕಾರಣವಾಗಿದೆ.

