Karnataka Budget

ಈ ದಿನದ ಮುಖ್ಯಾಂಶಗಳು: 16-02-24
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ 2ನೇ ಅವಧಿಯ ಬಜೆಟ್ ಮಂಡಿಸಿದ್ದಾರೆ. 3,71,383 ಕೋಟಿ ರೂಪಾಯಿ ಗಾತ್ರದ ಬಜೆಟ್ ಮೂಲಕ ಹಲವು ಹೊಸ ಯೋಜನೆಗಳನ್ನು ಘೋಷಿಸಿದರು.

ಬೆಂಗಳೂರಿಗೆ ಕಾವೇರಿ ನೀರು: ಮೇ ವೇಳೆಗೆ 5ನೇ ಹಂತದ ಯೋಜನೆ ಕಾರ್ಯಾರಂಭ - ಸಿಎಂ ಸಿದ್ದರಾಮಯ್ಯ
ಬೆಂಗಳೂರಿಗೆ ಕುಡಿಯುವ ನೀರಿನ ಅಗತ್ಯತೆಯನ್ನು ಪೂರೈಸಲು ಕಾವೇರಿ ಐದನೇ ಹಂತದ ಯೋಜನೆಯು ಈ ವರ್ಷ ಮೇ ವೇಳೆಗೆ ಕಾರ್ಯಾರಂಭ ಮಾಡಲಿದೆ

ಬಿಜೆಪಿಯವರ ತಲೆಯಲ್ಲಿ ಏನಿಲ್ಲ.. ಏನೂ ಇಲ್ಲ: ಏನಿಲ್ಲ... ಏನಿಲ್ಲ... ಎಂದ ಪ್ರತಿಪಕ್ಷಗಳಿಗೆ ಸಿದ್ದರಾಮಯ್ಯ ತಿರುಗೇಟು
ಈ ಬಾರಿ 3,71, 383 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಲಾಗಿದೆ. ಇದು ಕಳೆದ ಬಜೆಟ್ಗಿಂತ 46,630 ಕೋಟಿ ರೂ. ಹೆಚ್ಚು ಗಾತ್ರದ ಬಜೆಟ್

ಕರ್ನಾಟಕ ಬಜೆಟ್ 2024: ಮೀನುಗಾರರ ರಕ್ಷಣೆಗೆ 'ಸಮುದ್ರ ಆಂಬ್ಯುಲೆನ್ಸ್' ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಾಗ ತೀವ್ರ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ಕರೆತರಲು 'ಸಮುದ್ರ ಆಂಬುಲೆನ್ಸ್'

ಬೆಂಗಳೂರು ಸೇರಿ 11 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ
ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2024: ರಾಜ್ಯಾದ್ಯಂತ 50 ಕೆಫೆ ಹೋಟೆಲ್, 'ನಮ್ಮ ಮಿಲ್ಲೆಟ್' ಯೋಜನೆ ಘೋಷಿಸಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ 50 ಕೆಫೆ ಹೋಟೆಲ್ ಮತ್ತು ಸಿರಿಧಾನ್ಯ ಉತ್ಪನ್ನಗಳಿಗಾಗಿ 'ನಮ್ಮ ಮಿಲ್ಲೆಟ್' ಯೋಜನೆ ಘೋಷಣೆ ಮಾಡಿದ್ದಾರೆ.

ಬಜೆಟ್ ನಲ್ಲಿ ಮಹಿಳಾ ಪರ ಯೋಜನೆಗಳಿಗೆ ಸಿಂಹಪಾಲು: ಮಕ್ಕಳ ಯೋಜನೆಗಳಿಗಿಲ್ಲ ಹೆಚ್ಚಿನ ಪಾಲು!
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಆಯವ್ಯಯದ ಬಹುಪಾಲು ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಇಲಾಖೆ ಕಸಿದುಕೊಂಡಿದೆ.

ಕರ್ನಾಟಕ ಬಜೆಟ್: ಪ್ರಮುಖ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ಇಳಿಕೆ
ಕೃಷಿ, ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಪ್ರಮುಖ ಕ್ಷೇತ್ರಗಳಿಗೆ ಅನುದಾನದ ಹಂಚಿಕೆ ಕಡಿಮೆಯಾಗಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ಬದಲು ಅಗತ್ಯ ವಸ್ತುಗಳ ಮೇಲೆ ಕಡಿವಾಣ ಹಾಕಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ತರಾಟೆ; ಆರ್ಥಿಕತೆ ಹದಗೆಡಲು ಹಿಂದಿನ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ
'ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು ಮತ್ತು ರಾಜ್ಯದ ಆರ್ಥಿಕತೆಯು 'ಹದಗೆಡಲು' ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದರು.

