Karnataka Budget

ಸಿದ್ದರಾಮಯ್ಯ ಬಜೆಟ್ ನಲ್ಲಿ ಪೊಲೀಸ್ ಇಲಾಖೆಗೆ ಸಿಕ್ಕಿದ್ದೇನು?
ಬೆಂಗಳೂರು ನಗರದಲ್ಲಿ ಹೊಸದಾಗಿ 05 ಸಂಚಾರ ಪೊಲೀಸ್ ಠಾಣೆಗಳನ್ನು ಮತ್ತು 06 ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಕ್ರಮ. ಪೊಲೀಸ್ ಮೊಬಿಲಿಟಿ ಯೋಜನೆಯಡಿ ಇಲಾಖೆಯಲ್ಲಿನ ಹಳೆಯ ವಾಹನಗಳನ್ನು ಬದಲಾಯಿಸಲು 2023-24ನೇ ಸಾಲಿನಲ್ಲಿ 100 ಕೋಟಿ ರೂ. ಅನುದಾನ.

ರಾಜ್ಯ ಬಜೆಟ್ 2023: ಆ್ಯಸಿಡ್ ದಾಳಿ ಸಂತ್ರಸ್ತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್: ಶಾಲೆಗಳಲ್ಲಿ ವಾರಕ್ಕೆ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇನ್ನುಮುಂದೆ ವಾರದಲ್ಲಿ ಎರಡು ದಿನ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣನ್ನು ವಿತರಣೆ..

ದಾಖಲೆಯ 14ನೇ ಬಜೆಟ್ ಮಂಡನೆ: ಐದು ಚುನಾವಣಾ ಭರವಸೆಗಳಿಗೆ 52,000 ಕೋಟಿ ರೂ. ವೆಚ್ಚ- ಸಿದ್ದರಾಮಯ್ಯ
ನಮ್ಮ ಸರ್ಕಾರದ ಐದು ಪ್ರಮುಖ ಚುನಾವಣಾ 'ಖಾತರಿ'ಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು ಮತ್ತು 1.3 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಬಜೆಟ್ 2023: ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬಡ್ಡಿರಹಿತ ಸಾಲದ ಮಿತಿ 3 ಲಕ್ಷ ರೂ.ಗೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

2023-24ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಆಯವ್ಯಯ ಮಂಡನೆ
2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ರಾಜ್ಯ ಬಜೆಟ್ 2023: ಎಣ್ಣೆ ಪ್ರಿಯರಿಗೆ ಸರ್ಕಾರ 'ಕಿಕ್'; ಅಬಕಾರಿ ತೆರಿಗೆ ಹೆಚ್ಚಳ; ಇನ್ಮುಂದೆ ಮದ್ಯ ದುಬಾರಿ!
ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ನೀಡಿದ್ದಾರೆ.

ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ
ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

ಕರ್ನಾಟಕ ಬಜೆಟ್ 2023: ಸಿಎಂ ಸಿದ್ದರಾಮಯ್ಯ 14ನೇ ಬಾರಿ ಆಯವ್ಯಯ ಮಂಡನೆ, ಕಾಂಗ್ರೆಸ್ ಗ್ಯಾರಂಟಿಗಳತ್ತ ಎಲ್ಲರ ಚಿತ್ತ!
ಗ್ಯಾರಂಟಿಗಳ ಭರವಸೆಯೊಂದಿಗೆ ರಚನೆಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವು ಶುಕ್ರವಾರ (ಜುಲೈ7) ತನ್ನ ಮೊದಲ ಬಜೆಟ್ ಮಂಡಿಸಲಿದ್ದು, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯ ಮಂಡಿಸಲಿದ್ದಾರೆ.

