Karnataka Congress

ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಗೆ ಪಂಗನಾಮ ಹಾಕೋದು ಗ್ಯಾರಂಟಿ; ಕುರ್ಚಿಗೆ ಫೆವಿಕಾಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್ ಅಶೋಕ್
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕುರ್ಚಿಗೆ ಫೆವಿಕಾಲ್ ಹಾಕಿ ಅಂಟಿಸಿಕೊಳ್ಳುವ ವಿದ್ಯೆ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ. ಡಿ ಕೆ ಶಿವಕುಮಾರ್ ಗೆ ಅದೆಲ್ಲ ಗೊತ್ತಿಲ್ಲ, ಹೊಡೆದು ಕಿತ್ತುಕೊಳ್ಳುವ ಕಾಲ ಇದಲ್ಲ, ತಲೆ ಬಳಸಬೇಕಾದ ಕಾಲವಿದು ಎಂದರು.

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ
ಮಾಗಡಿ ಕ್ಷೇತ್ರದ ಶಾಸಕ ಹೆಚ್ ಸಿ ಬಾಲಕೃಷ್ಣ ಹುಟ್ಟುಹಬ್ಬದ ನೆಪದಲ್ಲಿ ಡಿ ಕೆ ಶಿವಕುಮಾರ್ ಬೆಂಬಲಿಗ ಶಾಸಕರೆಲ್ಲರೂ ಸೇರಿ ಸಭೆ ನಡೆಸಿದ್ದು, ಅದರಲ್ಲಿ ನಾಯಕತ್ವದ ಬದಲಾವಣೆ ಕುರಿತ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.

ಮೆಟ್ರೋ ಪ್ರಯಾಣ ದರ ಹೆಚ್ಚಳ: ಸಂಸದ ತೇಜಸ್ವಿ ಸೂರ್ಯ ದೆಹಲಿಗೆ ಓಡಿದ್ದು ಯಾಕೆ? ಕಾಂಗ್ರೆಸ್ ಪ್ರಶ್ನೆ
ಸಾರ್ವಜನಿಕರ ಆಕ್ರೋಶ ಹೆಚ್ಚಾದಾಗ ನೀವು ಜವಾಬ್ದಾರಿಯಿಂದ ಕೈ ತೊಳೆದುಕೊಂಡು ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬಿಜೆಪಿಯ 'ನುಂಗಪ್ಪ' ಜಾಹೀರಾತಿನ ವಿರುದ್ಧ ಕಾಂಗ್ರೆಸ್ ದೂರು
ಬಿಜೆಪಿಯ 'ನುಂಗಪ್ಪ' ಜಾಹೀರಾತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಮಹಾತ್ಮ ಗಾಂಧಿಯವರು ಕೋಲಿನಿಂದ ಹೊಡೆಯಲು ಹೋಗುತ್ತಿರುವಂತೆ ತೋರಿಸಲಾಗಿದೆ.

ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನ: ಫೆಬ್ರುವರಿ 13 ರಂದು ಅದ್ದೂರಿ ಕಾರ್ಯಕ್ರಮ; ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್
ಈಮಧ್ಯೆ, ಡಿಕೆ ಶಿವಕುಮಾರ್ ಶುಕ್ರವಾರ ದೆಹಲಿಗೆ ಆಗಮಿಸಿದರು. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ಸಭೆ ನಡೆಸಿದರು.

ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?
ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಮೇಲೆ ಮಾತ್ರ ಈ ಸಭೆಯಲ್ಲಿ ಗಮನ ಹರಿಸಲಾಗಿದೆ.

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ; ಮುಂದೇನು?
ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಕಾರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಏರ್ಪೋರ್ಟ್ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳು ಸಿಎಂ ನುಡಿದಂತೆ ನಡೆಯುತ್ತಿದ್ದಾರಾ ಎಂದು ಕೇಳಿದಾಗ, "ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವುಗಳು ಯಾರೂ ಪ್ರಶ್ನೆ ಮಾಡಿಲ್ಲ- ಡಿಕೆ ಶಿವಕುಮಾರ್

