Karnataka Congress

ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಕರ್ನಾಟಕ ಕಾಂಗ್ರೆಸ್ ಘಟಕವು ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ. ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆಯದ ಕನುಗೋಳು ಸ್ಟ್ಯಾಟರ್ಜಿ: ತೆಲಂಗಾಣ ಗೆಲುವು ರಾಜ್ಯ ಕಾಂಗ್ರೆಸ್ ಗೆ ಬೂಸ್ಟರ್ ಡೋಸ್!
ಪಕ್ಕದ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವು ಸಾಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಬೂಸ್ಟರ್ ಸಿಕ್ಕಿದಂತಾಗಿದೆ.

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆ ಗಂಟೆ: ಬಸವರಾಜ ಬೊಮ್ಮಾಯಿ
ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದೆ. ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಾತಿ ಸಮೀಕ್ಷೆ ವರದಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಇಕ್ಕಟ್ಟಿನಲ್ಲಿ ರಾಜ್ಯ ಕಾಂಗ್ರೆಸ್
ಬಹುಚರ್ಚಿತ ಜಾತಿ ಸಮೀಕ್ಷೆಯನ್ನು ಸಿಎಂ ಸಿದ್ದರಾಮಯ್ಯನವರು ಕಳೆದ ಬಾರಿ 2013ರಲ್ಲಿ ಅಧಿಕಾರಕ್ಕೆ ಬಂದಿದ್ದಾಗ ಆರಂಭಿಸಿದ್ದು, ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಉಪಾಹರ ಸಭೆಯಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ, ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಾಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ.. ಸಿಎಂ ಗಾದಿ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರಿಗ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಬೇಡ, ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸಿ: ಸಚಿವರಿಗೆ ಸಿಎಂ, ಡಿಸಿಎಂ ಕ್ಲಾಸ್!
ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನರ್ ರಚನೆ: ಶಶಿ ತರೂರ್, ಸಚಿನ್ ಪೈಲಟ್ ಸೇರ್ಪಡೆ; ಕರ್ನಾಟಕದ ಇಬ್ಬರಿಗೆ ಸ್ಥಾನ!
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಅಂಗವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (CWC) ಭಾನುವಾರ ಪುನರ್ ರಚಿಸಿದ್ದಾರೆ.

ಉಡುಪಿ ವಿಡಿಯೋ ರೆಕಾರ್ಡ್ ಪ್ರಕರಣ: ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವ ಉಳಿಸಲು ಬಿಜೆಪಿಗರಿಗೆ ಮನಸಿಲ್ಲವೇ?
ಬಿಜೆಪಿ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣ ಇದೀಗ ಮುನ್ನಲೆಗೆ ಬಂದಿದೆ.

ಪಕ್ಷದೊಳಗೆ ಶಾಸಕರ ಬೇಗುದಿ: ಆಗಸ್ಟ್ 2ರಂದು ಹೈಕಮಾಂಡ್ ಸಭೆ, ರಾಜ್ಯ ನಾಯಕರಿಗೆ ಬುಲಾವ್
ಕೈ ಶಾಸಕರ ಅಸಮಾಧಾನ ಪತ್ರದ ಬೆನ್ನಲ್ಲೇ ನಿನ್ನೆ ಬುಧವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದರು. ಸಭೆಯಲ್ಲಿ ಶಾಸಕರಿಗೆ ಒಗ್ಗಟ್ಟಿನ ಪಾಠವನ್ನು ಸಿಎಂ ಸಿದ್ದರಾಮಯ್ಯ ಮಾಡಿ ಹಲವು ಕಿವಿಮಾತುಗಳನ್ನು ಹೇಳಿದ್ದಾರೆ.

