Karnataka Election Results

"2024 ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವವಷ್ಟೇ ಸಾಲದು": ಬಿಜೆಪಿಗೆ ಆರ್ ಎಸ್ಎಸ್ ಮುಖವಾಣಿ
2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿಯನ್ನು ಆರಂಭಿಸಿದ್ದು, ಈ ಚುನಾವಣೆಯನ್ನು ಗೆಲ್ಲಲು ಮೋದಿ ಮ್ಯಾಜಿಕ್ ಹಾಗೂ ಹಿಂದುತ್ವವಷ್ಟೇ ಸಾಲದು ಎಂದು ಆರ್ ಎಸ್ಎಸ್ ಮುಖವಾಣಿಯೂ ಆಗಿರುವ ವಾರಪತ್ರಿಕೆ ಆರ್ಗನೈಸರ್ ಬಿಜೆಪಿಗೆ ಸಲಹೆ ನೀಡಿದೆ.

ಕರ್ನಾಟಕ ಚುನಾವಣೆ ಫಲಿತಾಂಶ: ಜನರು ಬಿಜೆಪಿ- ಪ್ರಧಾನಿ ಮೋದಿಯನ್ನು ತಿರಸ್ಕರಿಸಿದ್ದಾರೆ; ಕಾಂಗ್ರೆಸ್ ನಾಯಕರು
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಪ್ರವೃತ್ತಿಯನ್ನು ಅನುಸರಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಕರ್ನಾಟಕ ಚುನಾವಣಾ ಫಲಿತಾಂಶ: 100ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ, ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆ
ರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಂಜಾನೆ ಆರಂಭಗೊಂಡಿದ್ದು, ಅಂದಿನಿಂದ ಇಲ್ಲಿಯವರೆಗೂ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಯ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆ
ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ದತ್ತಪೀಠ ಚಳವಳಿಯ ಹಿನ್ನೆಲೆಯಲ್ಲಿ ಹಿಂದುತ್ವವಾದಿಗಳು ಈ ಪ್ರದೇಶವನ್ನು ಕರ್ನಾಟಕದ ಅಯೋಧ್ಯೆ ಎಂದು ಕರೆಯುತ್ತಾರೆ.

ಕಾಂಗ್ರೆಸ್ 120ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದು ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುತ್ತದೆ: ಸಿದ್ದರಾಮಯ್ಯ
16ನೇ ವಿಧಾನಸಭೆಯ ಸದಸ್ಯರ ಆಯ್ಕೆಗೆ ಮೊನ್ನೆಯಷ್ಟೇ ಮುಕ್ತಾಯವಾದ ಚುನಾವಣೆಯ ಫಲಿತಾಂಶ ಇಂದು ಮೇ 13ರಂದು ಪ್ರಕಟವಾಗುತ್ತಿದ್ದು ಈಗಾಗಲೇ 6ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ.

ಕರ್ನಾಟಕ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭವಾಗುತ್ತಿದ್ದಂತೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ
224 ಸದಸ್ಯರ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರು ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್- ಬಿಜೆಪಿ ನಡುವೆ ಪೈಪೋಟಿ; ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್‌ಗೆ ಆರಂಭಿಕ ಹಿನ್ನಡೆ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದ್ದು, ಮತಎಣಿಕೆಯ ಆರಂಭಿಕ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಜೆಡಿಎಸ್ ಕೂಡ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಸಂಪೂರ್ಣ ಬಹುಮತ ಸಿಗಲಿದೆ, ನಾವೇ ಸರ್ಕಾರ ರಚಿಸುತ್ತೇವೆ: ಯತೀಂದ್ರ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದೆ. ನಾವೇ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಚುನಾವಣಾ ಫಲಿತಾಂಶ: ಮತ ಎಣಿಕೆ ಆರಂಭ, ಫಲಿತಾಂಶದ ನಂತರ ತಂತ್ರ ರೂಪಿಸಲು ಕಾಂಗ್ರೆಸ್, ಬಿಜೆಪಿ ಸಿದ್ಧ
ತೀವ್ರ ಪೈಪೋಟಿಗೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ತೀರ್ಪಿನ ನಂತರದ ಕಾರ್ಯತಂತ್ರಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಅಂತಿಮಗೊಳಿಸಿವೆ.

