Karnataka Election results 2023

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023 LIVE UPDATES: ಕಾಂಗ್ರೆಸ್ ಗೆ ಭರ್ಜರಿ ಬಹುಮತ, ಬಿಜೆಪಿ, ಜೆಡಿಎಸ್ ಗೆ ಮುಖಭಂಗ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಭರ್ಜರಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದ್ದು, ಆಡಳಿತರೂಢ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗಕ್ಕೀಡಾಗಿವೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಸಂಜೆ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ
ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಕೊರಟಗೆರೆಯಲ್ಲಿ ಜಿ. ಪರಮೇಶ್ವರ್ ಗೆ 3 ಸಾವಿರ ಮತಗಳ ಮುನ್ನಡೆ
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಪರಮೇಶ್ವರ್ ಅವರು 3 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಚಾಮರಾಜಪೇಟೆಯಲ್ಲಿ ಜಮೀರ್ ಗೆ 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು 20 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ.

Karnataka Election results 2023: ಬಿಜೆಪಿ ಭದ್ರಕೋಟೆ ಕರಾವಳಿಯಲ್ಲೂ ಕೈ ತೀವ್ರ ಪೈಪೋಟಿ, 5 ಕ್ಷೇತ್ರಗಳಲ್ಲಿ ಕಮಲ, 3ರಲ್ಲಿ ಕಾಂಗ್ರೆಸ್ ಮುನ್ನಡೆ
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಭದ್ರಕೋಟೆ ಕರಾವಳಿಯಲ್ಲೂ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡುತ್ತಿದೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ, ಚಾಮರಾಜಪೇಟೆಯಲ್ಲಿ ಜಮೀರ್ ಗೆ ಹಿನ್ನಡೆ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಆರಂಭಿಕ ಮತಎಣಿಕೆ ಪ್ರಕ್ರಿಯೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಆರಂಭಿಕ ಹಿನ್ನಡೆಯಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023: ಎಲ್ಲ 224 ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭ
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023 ಪ್ರಕಟಣೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಮತಎಣಿಕೆ ಕಾರ್ಯ ಆರಂಭವಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023: 36 ಕೇಂದ್ರಗಳಲ್ಲಿ ಮತ ಎಣಿಕೆ, 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜ್ಯದ 36 ಮತ ಎಣಿಕೆ ಕೇಂದ್ರಗಳಲ್ಲಿ 2,615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ 2023: ಎಕ್ಸಿಟ್ ಪೋಲ್ ಫಲಿತಾಂಶದ ಮೇಲೆ ಕಾಂಗ್ರೆಸ್ ವಿಶ್ವಾಸ, ಕಾದು ನೋಡುವ ತಂತ್ರದಲ್ಲಿ ಜೆಡಿಎಸ್
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷವು ಅತ್ಯಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆಯ ಸಮೀಪಕ್ಕೆ ಬರಲಿದೆ ಎಂದು ಹೆಚ್ಚಿನ ಮತದಾನೋತ್ತರ ಸಮೀಕ್ಷೆಗಳು ಹೇಳಿವೆ.

