Karnataka elections

ಕರ್ನಾಟಕದ ಕರಾವಳಿ ಪ್ರದೇಶಕ್ಕೆ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಈಗಿನಿಂದಲೇ ಕಸರತ್ತು ಆರಂಭಿಸಿವೆ. ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಕಾಂಗ್ರೆಸ್ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ ಎಂದ ಸಿಎಂ ಬೊಮ್ಮಾಯಿ; ಬಿ.ಎಲ್.ಸಂತೋಷ್ ಹೇಳಿದ್ದೇನು?
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಹೇಳಿದ್ದರೂ, ಅವರೊಬ್ಬರೇ ಮುನ್ನಡೆಸುತ್ತಾರೆ ಎಂದಲ್ಲ. ಪಕ್ಷವು ತಂಡವಾಗಿ ಕೆಲಸ ಮಾಡಲಿದ್ದು, ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 108-114 ಸ್ಥಾನ, ಮತಗಳಿಕೆಯಲ್ಲೂ ಏರಿಕೆ; ಬಿಜೆಪಿಗೆ ಹಿನ್ನಡೆ: ಸಮೀಕ್ಷೆ
ಹೊರರಾಜ್ಯಗಳ ಸ್ವತಂತ್ರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲಲಿದ್ದು, ಆಡಳಿತಾರೂಢ ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟ ಬಿಜೆಪಿ ನಾಯಕರನ್ನು ಜೈಲಿಗೆ ಕಳಿಸುತ್ತೇವೆ: ಬಿ.ಕೆ.ಹರಿಪ್ರಸಾದ್
ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನೆಲ್ಲ ಜೈಲಿಗೆ ಕಳುಹಿಸುತ್ತೇವೆ. 90 ದಿನಗಳ ಅಧಿಕಾರ ಹೊಂದಿರುವ ಬಿಜೆಪಿ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅವರದ್ದೇ ಭಾಷೆಯಲ್ಲಿ ನಾನು ಸವಾಲು ಹಾಕುತ್ತೇನೆ.

ರಾಜ್ಯದಲ್ಲಿ ಆಮಿಷಗಳ ಕಾರುಬಾರು: ಸೀರೆ, ಸಿಹಿತಿಂಡಿ, ಆಹಾರ ಧಾನ್ಯಗಳ ವಿತರಣೆ; ಮಹಿಳೆಯರೇ ಹೈಲೈಟ್
ಚುನಾವಣೆಯ ಋತುವಿನ ಪ್ರಾರಂಭದಲ್ಲಿ, ಬೆಂಗಳೂರಿನಾದ್ಯಂತ ರಾಜಕಾರಣಿಗಳು ಸೀರೆಗಳು, ಕುಕ್ಕರ್‌ಗಳು, ಸಿಹಿತಿಂಡಿಗಳು, ಆಹಾರಧಾನ್ಯಗಳು ಮತ್ತು ಇತರ ಉಡುಗೊರೆಗಳೊಂದಿಗೆ ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡಿದ್ದಾರೆ.

ಬಿಜೆಪಿಗರೇ ನನ್ನನೂ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಿ: ರೌಡಿಶೀಟರ್ ಪಾನಿಪುರಿ ಮಂಜ
ರೌಡಿ ಶೀಟರ್‌ಗಳಾದ ಫೈಟರ್ ರವಿ, ಸೈಲೆಂಟ್ ಸುನೀಲ್ ಮತ್ತು ಬೆತ್ತನಗೆರೆ ಶಂಕರ ಬಿಜೆಪಿಗೆ ಸೇರ್ಪಡೆಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮೈಸೂರಿನ ರೌಡಿ ಶೀಟರ್‌ವೊಬ್ಬರು ತನ್ನನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ವಿಧಾನಸಭಾ ಚುನಾವಣೆ 2023: ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ; ಸಿದ್ದರಾಮಯ್ಯ ಸ್ಪಷ್ಟನೆ
ಊಹಾಪೋಹಗಳಿಗೆ ಶುಕ್ರವಾರ ತೆರೆ ಎಳೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳ ಬದಲಾಗಿ ಒಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

'ಹಗಲುಗನಸು ಬೇಡ... ಬೇಕಿದ್ದರೆ ರಾಜಕೀಯ ಬಿಡುತ್ತೇನೆ.. ಮಂಡ್ಯವನ್ನಲ್ಲ': ಸಂಸದೆ ಸುಮಲತಾ ಅಂಬರೀಷ್
ನಾನು ಮಂಡ್ಯ ಬಿಟ್ಟು ಹೋಗುತ್ತೇನೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ಆದರೆ ರಾಜಕೀಯ ಬಿಡುತ್ತೇನೆಯೇ ಹೊರತು ಮಂಡ್ಯವನ್ನಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಕೋಲಾರ: ಕಾಂಗ್ರೆಸ್ ನಲ್ಲಿರುವ 'ಬಿಜೆಪಿಗರನ್ನು' ನಂಬಿ ಕಣಕ್ಕಿಳಿಯಬೇಡಿ; ಸಿದ್ದರಾಮಯ್ಯಗೆ ಮುನಿಯಪ್ಪ ಸಲಹೆ
ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆಯುತ್ತಿರುವಂತೆಯೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಕೆ.ಹೆಚ್ ಮುನಿಯಪ್ಪ ಸಿದ್ದುಗೆ ಕಿವಿಮಾತೊಂದನ್ನು ಹೇಳಿದ್ದಾರೆ.

