Karnataka Governor

ಸಂಘರ್ಷ ಅಥವಾ ಸಂಧಾನ?: ಸಿದ್ದರಾಮಯ್ಯ ನಡೆಯತ್ತ ಎಲ್ಲರ ಚಿತ್ತ (ಸುದ್ದಿ ವಿಶ್ಲೇಷಣೆ)
ವಾಲ್ಮೀಕಿ ನಿಗಮದ ಹಣ ದುರುಪಯೋಗ, ಭ್ರಷ್ಟಾಚಾರದ ಹಗರಣದ ನಂತರ ಮೈಸೂರಿನ ನಿವೇಶನ ಹಂಚಿಕೆ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗುರ ತಂದಿರುವುದಂತೂ ಸತ್ಯ. ಆದರೆ ಸಿದ್ದರಾಮಯ್ಯ ಅವರನ್ನೇ ನೇರ ಗುರಿಯಾಗಿರಿಸಿಕೊಂಡಿರುವುದರ ಹಿಂದೆಯೂ ಅನೇಕ ನಿಗೂಢ ಸತ್ಯಗಳು ಅಡಗಿವೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ನಾಳೆ ರಾಜ್ಯಪಾಲರಿಗೆ ಮನವಿ
ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರ ಅನುಮತಿ ಪಡೆಯಲು ನಾನು ಶುಕ್ರವಾರ ಬೆಳಗ್ಗೆ 11.30ಕ್ಕೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡುತ್ತೇನೆ ಎಂದು ಅಬ್ರಹಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಬಸವರಾಜ ಬೊಮ್ಮಾಯಿ
ರಾಜ್ಯ ಸರ್ಕಾರ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಾಜ್ಯ ಬಜೆಟ್ ಅಧಿವೇಶನ: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್!
ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ.

ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದ ರಾಜ್ಯಪಾಲ
ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಖುದ್ದು ಭೇಟಿ ನೀಡಿ, ಗೌರವ ಸಲ್ಲಿಸಿದರು.

ಟಿಬಿ ಮುಕ್ತ ಭಾರತ ಉಪಕ್ರಮದಡಿಯಲ್ಲಿ 100 ಕ್ಷಯ ರೋಗಿಗಳ ದತ್ತು ಪಡೆದ ರಾಜ್ಯಪಾಲ ಗೆಹ್ಲೋಟ್
ಕೇಂದ್ರ ಸರ್ಕಾರದ ಟಿಬಿ ಮುಕ್ತ ಭಾರತ ಉಪಕ್ರಮದಡಿಯಲ್ಲಿ ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಲ್ಹೋಟ್ ಅವರು 100 ಕ್ಷಯ ರೋಗಿಗಳ ದತ್ತು ಪಡೆದಿದ್ದಾರೆ.

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ರಾಜ್ಯಪಾಲ ಗೆಹ್ಲೋಟ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!
ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಯುವಶಕ್ತಿಯಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ನಮ್ಮ ದೇಶ ಯುವ ರಾಷ್ಟ್ರ. ಇಂದಿನ ಯುವ ಸಮಾಜದ ಆದ್ಯತೆ ಬೇರೆಯವರಿಗಿಂತ ಭಿನ್ನವಾಗಿ ಯೋಚಿಸುವುದು, ಎಲ್ಲರಿಗಿಂತಲೂ ಕ್ಷಿಪ್ರ ವೇಗದಲ್ಲಿ ಸಾಧನೆ ಮಾಡುವುದು ಆಗಿರುತ್ತದೆ.

'ಕಲಿ'ಕಾಲ: ಕನ್ನಡ ಕಲಿಕೆಯಲ್ಲಿ ಗೌರ್ನರ್; ನೆನ್ನೆಯಲ್ಲಿ ನಾಳೆ ಕಲಿಯುತ್ತಿರುವ ನಾಯ್ಡು; ರಣ ನೀತಿ ಕಲಿಸುತ್ತಿರುವ ಶಾ!
ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್ಸದ್ಯಕ್ಕೆ ಚಂದ್ರ ಬಾಬು ನಾಯ್ಡು ಬದುಕಿನಲ್ಲೂ ಇತಿಹಾಸ ಬದಲಾಗಿದೆ. But I am at the receiving end ಎಂದು ಮರುಗುತ್ತಿದ್ದಾರೆ.

