karnataka govt

ಸೇವಾ ಸಿಂಧು ಪೋರ್ಟಲ್ ನಲ್ಲಿ ಚಾಲಕರ ಅರ್ಜಿ ಕಾಲಂ ತೆಗೆದ ಸರ್ಕಾರ: ಸಾರಥಿಗಳನ್ನು ನಡುನೀರಿನಲ್ಲಿ ಕೈಬಿಟ್ಟ ಸರ್ಕಾರ
ಅವೈಜ್ಞಾನಿಕ ಲಾಕ್ ಡೌನ್ ಜಾರಿ ಮಾಡಿ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಬರೆ ಎಳೆದಿದ್ದ ಸರ್ಕಾರ, ಇದೀಗ ನೆರವು ನೀಡುವುದಾಗಿ ನಂಬಿಸಿ ಲಕ್ಷಾಂತರ ಚಾಲಕರನ್ನು ನಡು ನೀರಿನಲ್ಲಿ ಕೈಬಿಟ್ಟಿದೆ.

ಕೊರೋನಾ ಎಫೆಕ್ಟ್: ಕೆಸಿ ಜನರಲ್ ಆಸ್ಪತ್ರೆಯ ಐಸಿಯು ಬೆಡ್ ಗಳ ಸಂಖ್ಯೆ 6 ರಿಂದ 100ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ರಾಜ್ಯ ಸರ್ಕಾರದಿಂದ ಅನ್ ಲಾಕ್ 3 ಮಾರ್ಗಸೂಚಿ ಬಿಡುಗಡೆ: ಭಾನುವಾರ ಲಾಕ್ ಡೌನ್ ರದ್ದು, ರಾತ್ರಿ ಕರ್ಫ್ಯೂ ಸಹ ತೆರವು
ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿದೆ.

ಕೋವಿಡ್-19 ನಿಂದ ರಾಜ್ಯದ ಅಭಿವೃದ್ಧಿ ವೇಗಕ್ಕೆ ಕಂಟಕವಾಗಿರುವ ನೋವು ನನಗಿದೆ: ಸಿಎಂ ಬಿ.ಎಸ್. ಯಡಿಯೂರಪ್ಪ
ಕೋವಿಡ್ 19 ಸೋಂಕಿನಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನೆಡೆಯಾಗಿದ್ದು, ಕೋವಿಡ್ ಸಂಕಷ್ಟ ಬರದೇ ಇದ್ದಿದ್ದರೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬಹುದಿತ್ತು. ಪ್ರಗತಿಯಲ್ಲಿ ಹಿನ್ನೆಡೆ ಕಂಡ ನೋವು ನನಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.

ಇನ್ನುಮುಂದೆ ಬೆಂಗಳೂರಿನಲ್ಲಿ ಕೊರೋನಾ ವೈರಸ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಉಚಿತ
ಬೆಂಗಳೂರಿನಲ್ಲಿ ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ವೆಚ್ಚವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದ್ದು, ಈ ಅಂತ್ಯಕ್ರಿಯೆಯ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ.

ಕೋವಿಡ್-19: 500 ಬೆಡ್ ನೀಡಲು ಎಂಎಸ್ಆರ್ ಆಸ್ಪತ್ರೆ ಒಪ್ಪಿಗೆ: 10 ವೆಂಟಿಲೇಟರ್, 10 ಡಯಾಲಿಸಿಸ್ ಯಂತ್ರ ಬೇಡಿಕೆಗೂ ಸಮ್ಮತಿ
ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರಿಗಾಗಿ ಈಗಾಗಲೇ 340 ಹಾಸಿಗೆಗಳನ್ನು ಮೀಸಲಿಡಲಾಗಿದ್ದು,ಮುಂದಿನ ಎರಡು ವಾರದಲ್ಲಿ ಅವುಗಳನ್ನು 500 ಹಾಸಿಗೆಗಳಿಗೆ ಹೆಚ್ಚಿಸಿ ಸರ್ಕಾರದ ವಶಕ್ಕೆ ನೀಡಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ.

ಕೊರೋನಾ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ 2000, ಖಾಸಗಿ ಆಸ್ಪತ್ರೆಯಲ್ಲಿ 3 ಸಾವಿರ ರೂ. ದರ ನಿಗದಿ: ಸಚಿವ ಸುಧಾಕರ್
ಕೋವಿಡ್-19 ನಿಯಂತ್ರಣವನ್ನು ಮಾಡುವುದಕ್ಕೆ ಏನೇನು ಮಾಡಬೇಕು? ಪರೀಕ್ಷೆಗಳ ಸಾಮರ್ಥ್ಯ ಹೆಚ್ಚಿಗೆ ಹೇಗೆ ಮಾಡಬೇಕು? ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಏನೇನು ಔಷಧಿ, ಉಪಕರಣಗಳನ್ನು ಖರೀದಿಸಬೇಕೆಂದು ಇಂದಿನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಚೆರ್ಚೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಜನನ ಮರಣ ಪ್ರಮಾಣ ಪತ್ರ ವಿತರಣೆ ಅಧಿಕಾರ ಇನ್ನು ಮುಂದೆ ಪಿಡಿಒಗೆ
ಜನನ ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ಲಾಸ್ಮ ದಾನ ಮಾಡುವವರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ: ಸಚಿವ ಸುಧಾಕರ್
ಕೋವಿಡ್ ನಿಂದ ಗುಣಮುಖರಾಗಿರುವವರು ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡುವ ಮೂಲಕ ಅವರ ಚಿಕಿತ್ಸೆಗೆ ಸಹಕಾರ ನೀಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಮನವಿ ಮಾಡಿದ್ದಾರೆ.

