karnataka govt

ಕೊರೋನಾ ಲಾಕ್ ಡೌನ್ 3.0: 43 ದಿನಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ಗಾರ್ಮೆಂಟ್ಸ್ ಗಳು ಪುನಾರಂಭ
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕಳೆದ 43 ದಿನಗಳಿಂದ ಮುಚ್ಚಲ್ಪಟ್ಟಿದ್ದ ಬೆಂಗಳೂರಿನ ಗಾರ್ಮೆಂಟ್ಸ್ ಗಳು ಮತ್ತೆ ಇಂದಿನಿಂದ ಪುನಾರಂಭಗೊಂಡಿವೆ,

ಕಾರ್ಮಿಕರನ್ನು ಕಳುಹಿಸಲು ಅನುಕೂಲವಾಗುವಂತೆ ನಾಲ್ಕು ರಾಜ್ಯಗಳಿಗೆ ನೋಡಲ್ ಅಧಿಕಾರಿಗಳ ನೇಮಕ
ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳ ಕಾರ್ಮಿಕರು ಕರ್ನಾಟಕದಲ್ಲಿ ಬಾಕಿಯಾಗಿರುವವರನ್ನು ಅವರ ಊರುಗಳಿಗೆ ಕಳುಹಿಸಲು ರಾಜ್ಯ ಸರ್ಕಾರ ಈಗಾಗಲೇ ಹಲವು ಉಪಕ್ರಮಗಳನ್ನು ಕೈಗೊಂಡಿದ್ದು ಇದೀಗ ಮಹಾರಾಷ್ಟ್ರ, ಗೋವಾ, ರಾಜಸ್ತಾನ ಮತ್ತು ಗುಜರಾತ್ ರಾಜ್ಯಗಳ ಜನರ ನೆರವಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.

ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿಗೆ ಸರ್ಕಾರ ಬ್ರೇಕ್, ಮೂಲದರದಲ್ಲೇ ಊರಿಗೆ ತೆರಳಲು ಅನುಮತಿ
ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ನಿಗದಿಯಾದ ಬಸ್ಸುಗಳ ಪ್ರಯಾಣಕ್ಕೆ ದುಪ್ಪಟ್ಟು ದರ ವಿಧಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ಸರ್ಕಾರಿ ಬಸ್ಸುಗಳಲ್ಲಿ ಮೂಲದರದೊಂದಿಗೇ ಊರಿಗೆ ತೆರಳಲು ಅನುಮತಿ ನೀಡಿದೆ.

ಆರ್ಥಿಕ ಸಂಕಷ್ಟ, ವೇತನ ವಿಳಂಬದ ಆತಂಕದಲ್ಲಿ ರಾಜ್ಯ ಸರ್ಕಾರಿ ನೌಕರರು; ನಿಜಸ್ಥಿತಿ ಏನು?
ಈಗಾಗಲೇ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಖಾಜಾನೆ ಖಾಲಿಯಾಗಿದ್ದು, ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಲ್ಲಿ ತಮ್ಮ ವೇತನ ಪಾವತಿ ವಿಳಂಬವಾಗುವ ಆತಂಕ ಎದುರಾಗಿದೆ.

ಬೆಂಗಳೂರು: ಮಾಧ್ಯಮದವರಿಗೆ ಕೊವಿಡ್-19 ತಪಾಸಣೆಗೆ ವಿಶೇಷ ಶಿಬಿರ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮ ಪ್ರತಿನಿಧಿಗಳಿಗೂ ಕೊವಿಡ್-19 ತಪಾಸಣಾ ಶಿಬಿರ ಏರ್ಪಡಿಸುವಂತೆ ವಾರ್ತಾ ಇಲಾಖೆಯ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರಿಗೆ ಆದೇಶಿಸಿದ್ದಾರೆ.

ಕೆಲಸದಿಂದ ತೆಗೆಯಬೇಡಿ, ಬೇಕಾದರೆ ಸಂಬಳ ಕಟ್ ಮಾಡಿ: ಐಟಿ ಕಂಪನಿಗಳಿಗೆ ರಾಜ್ಯ ಸರ್ಕಾರ
ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬೇಡಿ. ಬೇಕಾದರೆ ಅವರ ಸಂಬಳ ಕಡಿತಮಾಡಿ ಎಂದು ರಾಜ್ಯ ಸರ್ಕಾರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಕಂಪನಿಗಳಿಗೆ ಶುಕ್ರವಾರ ಸೂಚಿಸಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಕಲಬುರಗಿ ವೃದ್ಧ ಸಾವು, ಮತ್ತೆ 6 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 181ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ಗೆ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯ 65 ವರ್ಷದ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಲಾಕ್‌ಡೌನ್ ಮುಂದುವರಿದರೆ ಸರ್ಕಾರಿ ನೌಕರರ ಸಂಬಳ ಕಡಿತ: ಸಿಎಂ ಬಿಎಸ್ ಯಡಿಯೂರಪ್ಪ
ಕೊರೋನಾ ವೈರಸ್ ನಿಂದಾಗಿ ಪರಿಸ್ಥಿತಿ ಹೀಗೆ ಮುಂದುವರೆದು, ಲಾಕ್ ಡೌನ್ ಮುಂದುವರೆದರೆ ಆರ್ಥಿಕ ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರಿ ನೌಕರರ ಸಂಬಳ ಕಡಿತ ಅನಿವಾರ್ಯವಾಗಬಹುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸಾಮೂಹಿಕ ವಿವಾಹದ ಮೇಲೆ ಕೊರೋನಾ ಕರಿನೆರಳು: ಸರ್ಕಾರದ ಸಪ್ತಪದಿ ಯೋಜನೆ ಮುಂದೂಡಿಕೆ
ರಾಜ್ಯ ಸರ್ಕಾರದ ಮಹತ್ವದ ಸಪ್ತಪದಿ ಯೋಜನೆ ಮೇಲೆ ಕೊರೋನಾ ಕರಿನೆರಳು ಆವರಿಸಿದ್ದು, ಸಾಮೂಹಿಕ ವಿವಾಹ ಯೋಜನೆ ಮುಂದೂಡಲಾಗಿದೆ.

