Karnataka HC

ವೈಟ್ಫೀಲ್ಡ್ ಠಾಣೆಯಲ್ಲ 'ಡಾರ್ಕ್ ಫೀಲ್ಡ್' ಠಾಣೆ: ಹಿಂದೂ ಕಾರ್ಯಕರ್ತನ ಬಂಧನ ಸಂಬಂಧ ACP, DCP ವಿರುದ್ದ ಜಡ್ಜ್ ಗರಂ, Video!
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಆಯೋಜನೆಗೊಂಡಿದ್ದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಶೋ ರದ್ದು ಮಾಡುವಂತೆ ಹಿಂದೂ ಕಾರ್ಯಕರ್ತ ಮೋಹನ್ ಗೌಡ ಎಂಬುವರು ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ನಂತರ ಕುನಾಲ್ ಕಾಮ್ರಾ ಶೋ ರದ್ದು ಮಾಡಲಾಗಿತ್ತು.

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ
ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಹೆಬ್ಬಾಳ ಸುರಂಗ ರಸ್ತೆ ಯೋಜನೆ: PIL ಗೆ 10 ದಿನಗಳೊಳಗೆ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಯೋಜನೆಯಿಂದ ಪರಿಸರದ ಮೇಲೆ ಉಂಟಾಗುವ ಪರಿಣಾಮದ ಕುರಿತು ಯಾವುದೇ ಅಧ್ಯಯನ ನಡೆಸಲಾಗಿದೆಯೇ, ವಿಶೇಷವಾಗಿ ಹೆಬ್ಬಾಳ ಕೆರೆಗೆ ನೀರಿನ ಒಳಹರಿವು ಮತ್ತು ಹೊರಹರಿವು ಅಡ್ಡಿಯಾಗುತ್ತದೆಯೇ, ಜಲಮಾರ್ಗಗಳಿಗೆ ತೊಂದರೆಯಾಗುತ್ತದೆಯೇ ಎಂಬ ವಿವರಗಳನ್ನು ದಾಖಲಾತಿಗಳೊಂದಿಗೆ 10 ದಿನಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ; ಸರ್ಕಾರಕ್ಕೆ ಹೈಕೋರ್ಟ್ ಚಾಟಿ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ FIR ದಾಖಲಿಸಿದ ಪೊಲೀಸರ ನಡೆಯನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ.

ಬೆಂಗಳೂರು ಸುರಂಗ ರಸ್ತೆ ಯೋಜನೆ ವಿರುದ್ಧ ಸಂಸದ Tejasvi Surya PIL
ಈ ವಿಷಯವನ್ನು ಜುಲೈ 6 ರಂದು ವಿಚಾರಣೆಗೆ ಪಟ್ಟಿ ಮಾಡಲಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸೋಮವಾರ ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿದೆ.

BJP ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧದ FIR ರದ್ದು
ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹನ ಮತ್ತು ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ
ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆ ಉಂಟುಮಾಡುವ ಮಾಧ್ಯಮ ಪ್ರಸಾರಗಳನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಹೇಳಿದೆ.

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್ ಭೇಟಿಗೆ ಹೈಕೋರ್ಟ್ ಸೂಚನೆ; ಅರ್ಜಿ ಇತ್ಯರ್ಥ!
ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿ ಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು ನಿರ್ದೇಶಿಸಲಾಗಿದೆ...

ಯೋಗೇಶ್ ಗೌಡ ಕೊಲೆ ಪ್ರಕರಣ: ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

