Karnataka HC

ಕರ್ನಾಟಕ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ನಿಂದ 10 ಹೆಸರು ಶಿಫಾರಸು
12 ಹೈಕೋರ್ಟ್ ಗಳಿಗೆ 68 ಖಾಯಂ ನ್ಯಾಯಾಧೀಶರ ನೇಮಕ ಮಾಡುವ ಐತಿಹಾಸಿನ ನಿರ್ಧಾರ ತೆಗೆದುಕೊಳ್ಳಲಿರುವ ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಕರ್ನಾಟಕದ ಹೈಕೋರ್ಟ್ ನ ಖಾಯಂ ನ್ಯಾಯಾಧೀಶರ ನೇಮಕಕ್ಕೆ 10 ಹೆಸರುಗಳನ್ನು ಶಿಫಾರಸ್ಸು ಮಾಡಿದೆ.

ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್ ಚಂದ್ರ ಶರ್ಮಾ ನೇಮಕ
ರಾಜ್ಯ ಹೈಕೋರ್ಟ್ ನ ನೂತನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇಮಕಗೊಂಡಿದ್ದಾರೆ.

ಸಿಡಿ ಹಗರಣ: ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ಪ್ರಗತಿ ಸಾಧ್ಯವೇ?- ಸರ್ಕಾರಕ್ಕೆ ಹೈ ಪ್ರಶ್ನೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಹಗರಣದ ತನಿಖೆಯನ್ನು ವಿಶೇಷ ತನಿಖಾದಳ (ಎಸ್ ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಮುಂದುವರೆಸುವ ವಿಚಾರವಾಗಿ ಹೈಕೋರ್ಟ್ ಸರ್ಕಾರದಿಂದ ವಿವರಣೆಯನ್ನು ಕೇಳಿದೆ.

ಯುಪಿ ಪೊಲೀಸರು ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್: ಟ್ವಿಟರ್ ಇಂಡಿಯಾ ಎಂಡಿಗೆ ನಿರಾಳ
ಟ್ವಿಟರ್ ನಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವಂತಹ ಸೂಕ್ಷ್ಮ ವಿಡಿಯೋವೊಂದರ ಅಳವಡಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ ನ ಲೊನಿ ಬಾರ್ಡರ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 41 -ಎ ಅಡಿಯಲ್ಲಿ ನೀಡಿದ್ದ ನೋಟಿಸ್ ನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಮುಷ್ಕರ ನಡೆಸುವ ಸಮಯ ಇದಲ್ಲ, ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಹೈಕೋರ್ಟ್ ಸೂಚನೆ
ಇಡೀ ರಾಜ್ಯ ಕೊರೋನಾ ವೈರಸ್ ಹಿಡಿತದಲ್ಲಿರುವುದರಿಂದ ಮುಷ್ಕರ ನಡೆಸಲು ಇದು ಅತ್ಯಂತ ಕೆಟ್ಟ ಸಮಯ. ಕೂಡಲೇ ಮುಷ್ಕರ ನಿಲ್ಲಿಸಿ, ಸೇವೆ ಆರಂಭಿಸಿ ಎಂದು ಹೈಕೋರ್ಟ್ ಮಂಗಳವಾರ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚನೆ ನೀಡಿದೆ.

ಸಹಾನುಭೂತಿಯ ನೆಲೆಯಲ್ಲಿ ವಿವಾಹಿತ ಮಗಳಿಗೆ ನೇಮಕಾತಿ ನಿರಾಕರಿಸುವುದು ಸಂವಿಧಾನ ವಿರೋಧಿ: ಹೈಕೋರ್ಟ್
ಸಹಾನುಭೂತಿಯ ನೆಲೆಯಲ್ಲಿ ನೇಮಕಾತಿ ನೀಡುವಾಗ ವಿವಾಹಿತ ಹೆಣ್ಣುಮಗಳನ್ನು ಕುಟುಂಬದ ಅಭಿವ್ಯಕ್ತಿಯ ಪರಿಧಿಯಿಂದ ಹೊರಗಿಡುವುದು ಅಕ್ರಮ ಹಾಗೂ ಅಸಾಂವಿಧಾನಿಕ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

3 ವಾರದೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶ
ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ.

ನಿಗದಿಯಂತೆ ನಾಳೆ ಸಿಇಟಿ ಪರೀಕ್ಷೆ ನಡೆಯಲಿದೆ: ಮುಂದೂಡುವಂತೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ರಾಜ್ಯದಲ್ಲಿ ಜು.30 ಮತ್ತು 31ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮುಂದೂಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಸಿಇಟಿ ಪರೀಕ್ಷೆಗಳು ನಿಗದಿಯಂತೆ ನಾಳೆ ನಡೆಯಲಿದೆ.

ಲಾಕ್ ಡೌನ್ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿರುವ ಹೈಕೋರ್ಟ್
ಲಾಕ್ ಡೌನ್ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದೆ.

