Karnataka Lock down

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ಪ್ರೋತ್ಸಾಹ ಧನ ವಿತರಣೆ: ಸಚಿವ ಎಸ್.ಟಿ. ಸೋಮಶೇಖರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1271 ಮಂದಿ ಆಶಾ ಕಾರ್ಯಕರ್ತೆಯರಿದ್ದಾರೆ. ಅವರಿಗೆ ಸಹಕಾರ ಇಲಾಖೆಯಿಂದ ತಲಾ 3 ಸಾವಿರ ಪ್ರೋತ್ಸಾಹಧನವನ್ನು ನೀಡುವ ನಿಟ್ಟಿನಲ್ಲಿ ಖುದ್ದು ನಾನೇ ಜಿಲ್ಲೆಗೆ ಬಂದಿದ್ದೇನೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ವಲಸೆ ಕಾರ್ಮಿಕರ ವಿಚಾರದಲ್ಲಿ ಮಾನವೀಯತೆಯಿಂದ ವರ್ತಿಸಿ: ಖಂಡ್ರೆ
ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗಲೇ ಬದುಕು ಕಲ್ಪಿಸುವುದು ಸರ್ಕಾರದ ಕರ್ತವ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಪ್ರಯಾಣಿಕರಿಂದ ಹೆಚ್ಚುವರಿಯಾಗಿ ಹಣ ಪಡೆದರೆ ದಂಡ: ಸಾರಿಗೆ ಆಯುಕ್ತರ ಎಚ್ಚರಿಕೆ
ಕೊರೋನಾ ವೈರಸ್ ಲಾಕ್ ಡೌನ್ ಬೆನ್ನಲ್ಲೇ ಸಾರಿಗೆ ಸಂಸ್ಥೆಗಳು ಪ್ರಯಾಣಿಕರಿಂದ ಹೆಚ್ಚುವರಿ ಹಣ ಪಡೆದರೆ ದಂಡ ಹಾಕಲಾಗುತ್ತದೆ ಎಂದು ಸಾರಿಗೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಕೊನೆಗೂ ಕುಡುಕರ ಮೊರೆ ಆಲಿಸಿದ ಕೇಂದ್ರ; ಹಸಿರು ವಲಯಗಳಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ
ಕೊರೋನಾ ವೈರಸ್ ಲಾಕ್ ಡೌನ್ ಹೇರಿದಾಗಿನಿಂದಲೂ ಬಂದ್ ಆಗಿದ್ದ ಮದ್ಯದಂಗಡಿಗಳ ಬಾಗಿಲು ತೆರೆಯಲು ಕೊನೆಗೂ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಕೋವಿಡ್-19 ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಇಡೀ ರಾಜ್ಯ ಲಾಕ್ ಡೌನ್ ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಉದ್ದೇಶಿಸಲಾಗಿದೆ.

ಲಾಕ್ ಡೌನ್ನಿಂದ ಸಾರಿಗೆ ಸಂಸ್ಥೆಗೆ 816.23 ಕೋಟಿ ರೂ. ನಷ್ಟ
ಕೊರೋನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಲು ಸರ್ಕಾರವು ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ)ಕ್ಕೆ ಇದುವರೆಗೆ 816.23 ಕೋಟಿ ರೂ. ನಷ್ಟ ಉಂಟಾಗಿದೆ.

ಭದ್ರತಾ ಆತಂಕ: ಝೂಮ್ ಆ್ಯಪ್ ಬಳಕೆ ಕೈ ಬಿಟ್ಟ ಕರ್ನಾಟಕ ಆರೋಗ್ಯ ಸಚಿವಾಲಯ
ಚೀನಾ ಮೂಲದ ಖ್ಯಾತ ಕಾನ್ಫರೆನ್ಸ್ ಆ್ಯಪ್ 'ಝೂಮ್' ಕುರಿತಂತೆ ಗಂಭೀರ ಸ್ವರೂಪದ ಭದ್ರತಾ ಆತಂಕ ವ್ಯಕ್ತವಾದ ಬೆನ್ನಲ್ಲೇ ಕರ್ನಾಟಕ ಆರೋಗ್ಯ ಸಚಿವಾಲಯ ಈ ಆ್ಯಪ್ ಬಳಕೆಯನ್ನು ಕೈ ಬಿಟ್ಟಿದೆ.

'ಭಾರತದಲ್ಲಿನ ಶೇ.80ರಷ್ಟು, ಕರ್ನಾಟಕದ ಶೇ.60ರಷ್ಟು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇಲ್ಲ': ಆರೋಗ್ಯ ಸಚಿವಾಲಯ ಮಾಹಿತಿ
ಮಾರಕ ಕೊರೋನಾ ವೈರಸ್ ಕುರಿತಂತೆ ಆರೋಗ್ಯ ಸಚಿವಾಲಯ ಆಘಾತಕಾರಿ ಮಾಹಿತಿಯೊಂದನ್ನು ಹೊರ ಹಾಕಿದ್ದು, ಕರ್ನಾಟಕದಲ್ಲಿನ ಶೇ.60ರಷ್ಚು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇರಲಿಲ್ಲ ಎಂದು ಹೇಳಿದೆ.

ಕೊರೋನಾ ವೈರಸ್ ಲಾಕ್ ಡೌನ್: ಗರ್ಭಿಣಿ ಮಗಳನ್ನು ನೋಡಲು ಪೊಲೀಸರ ಕಣ್ತಪ್ಪಿಸಿ ಹೋಗಿದ್ದ ತಂದೆ ಜಲ ಸಮಾಧಿ
ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಆಸ್ಪತ್ರೆಗೆ ದಾಖಲಿಸಿದ್ದ ಗರ್ಭಿಣಿ ಮಗಳನ್ನು ನೋಡಲು ಹೋದ ತಂದೆ ಜಲ ಸಮಾಧಿಯಾಗಿರುವ ಹೃದಯವಿದ್ರಾವಕ ಘಟನೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ನಡೆದಿದೆ.

