Karnataka Lokasabha Election 2024

ಲೋಕಸಭಾ ಚುನಾವಣೆ 2024: ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ, ಏಪ್ರಿಲ್ 4 ಕೊನೆ ದಿನ
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂದ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.

ಮತದಾನ ಜಾಗೃತಿ ಅಭಿಯಾನ: ವಿಶೇಷ ಚೇತನರ ಬೈಕ್ ಜಾಥಾಗೆ ರಜನೀಶ್ ಗೋಯಲ್ ಚಾಲನೆ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಜನೀಶ್ ಗೋಯಲ್ ಚಾಲನೆ ನೀಡಿದ್ದಾರೆ.

ಚಿತ್ರದುರ್ಗ ಬಿಜೆಪಿ ಟಿಕೆಟ್ ಘೋಷಣೆ: ಕೇಂದ್ರ ಸಚಿವ ನಾರಾಯಣಸ್ವಾಮಿ ಹೋರಾಟ ವ್ಯರ್ಥ, ಗೋವಿಂದ ಕಾರಜೋಳ ಕಣಕ್ಕೆ!
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರ ಬದಲಿಗೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ್ ಎಂ ಕಾರಜೋಳ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ನಕಲಿ ವಾಟ್ಸಾಪ್ ಸಂದೇಶ; ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ
ಕರ್ನಾಟಕ ಬಿಜೆಪಿ ಘಟಕವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಪಕ್ಷಕ್ಕೆ ಕಳಂಕ ತರಲು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಾಟ್ಸಾಪ್ ಸಂದೇಶವನ್ನು ಹರಿಬಿಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.

ಪತ್ನಿ ಅಂಜಲಿ ನಿಂಬಾಳ್ಕರ್‌ಗೆ ಕಾಂಗ್ರೆಸ್ ಟಿಕೆಟ್; ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಬಿಜೆಪಿ ಒತ್ತಾಯ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿರುವ ಅಂಜಲಿ ನಿಂಬಾಳ್ಕರ್ ಅವರ ಪತಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಮತ್ತು ಅವರನ್ನು ಚುನಾವಣೆ ಸಂಬಂಧಿತ ಎಲ್ಲ ಕೆಲಸಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಬುಧವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಕೋಲಾರ ಟಿಕೆಟ್ ವಿಚಾರ: ಮುನಿಯಪ್ಪ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ 'ಪುಟಗೋಸಿ' ಪದ ಬಳಕೆ!
ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ? ಪ್ರಹ್ಲಾದ್ ಜೋಶಿಗೆ ದೊಡ್ಡ ಸವಾಲು!
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸತತ ಐದನೇ ಬಾರಿ ಬಿಜೆಪಿಯಿಂದ ಚುನಾವಣಾ ಕಣದಲ್ಲಿದ್ದಾರೆ.

ಮಂಡ್ಯ ಲೋಕಸಭೆ JDS ಪಾಲು: ಮುನಿಸಿಕೊಂಡ ಬಿಜೆಪಿ ಮುಖಂಡರ ಮನವೊಲಿಸಲು ವಿಜಯೇಂದ್ರ ಯತ್ನ!
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅಂತೂ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸ್ಪರ್ಧೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಲೋಕಸಭಾ ಚುನಾವಣೆ 2024: ಡಿಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

