Karnataka Lokasabha Election 2024

ಲೋಕಸಭೆ ಚುನಾವಣೆ: ರೌಡಿಶೀಟರ್‌ಗಳ ಮನೆ ಮೇಲೆ ದಾಳಿ; ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಸೂಚನೆ
ಪಶ್ಚಿಮ ವಿಭಾಗದ ಪೊಲೀಸರು ಶನಿವಾರ ಬೆಳಗ್ಗೆ 326 ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಕಾಟನ್‌ಪೇಟೆ, ಕಲಾಸಿಪಾಳ್ಯ, ಜೆಜೆ ನಗರ ಮತ್ತು ಇತರ ಕಡೆಗಳಲ್ಲಿ ಮುಂಜಾನೆ ದಾಳಿ ನಡೆಸಲಾಯಿತು.

ಕೋಲಾರ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟು: ಅಳಿಯನಿಗೆ ಟಿಕೆಟ್ ಕೊಡುವಂತೆ ಮುನಿಯಪ್ಪ ಪಟ್ಟು; ರಮೇಶ್ ಕುಮಾರ್ ಬಣದ ವಿರೋಧ!
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಇನ್ನು ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಾಕಿ ಇದೆ.

ಈ ಬಾರಿ ಚುನಾವಣೆಯಲ್ಲಿ ಸೋತರೇ... ನಾನು ಇದ್ದೂ ಸತ್ತಂತೆ: ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಸೋಲನುಭವಿಸಿದರೆ ಅದು ನನಗೆ ಇದ್ದು ಸತ್ತಂತೆಯೇ ಇರುತ್ತದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಶುಕ್ರವಾರ ಹೇಳಿದ್ದಾರೆ.

ದಕ್ಷಿಣ ಕನ್ನಡ: ಹಿಂದುತ್ವದ ಭದ್ರಕೋಟೆಯಲ್ಲಿ ಕಾಂಗ್ರೆಸ್ ತಂತ್ರ; ಬಿಜೆಪಿ ವಿರುದ್ಧ ಬಿಲ್ಲವ ಸಮುದಾಯದ ಪದ್ಮರಾಜ್ ಕಣಕ್ಕೆ!
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ವಕೀಲ ಪದ್ಮರಾಜ್ ಆರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಪ್ರಬಲ ಬಿಲ್ಲವ ಸಮುದಾಯಕ್ಕೆ ಸೇರಿದ 53 ವರ್ಷದ ಪದ್ಮರಾಜ್ ಅವರು ಹಿರಿಯ ರಾಜಕಾರಣಿ ಬಿ ಜನಾರ್ಧನ ಪೂಜಾರಿಯವರ ಸಹವರ್ತಿಯಾಗಿದ್ದಾರೆ.

ಪ್ರೀತಂಗೌಡ ಜೊತೆ ಚರ್ಚಿಸಿ ಸಮಾಧಾನ ಮಾಡುತ್ತೇವೆ: ಬಿಎಸ್ ವೈ ಭೇಟಿ ಬಳಿಕ ಪ್ರಜ್ವಲ್ ರೇವಣ್ಣ ಹೇಳಿಕೆ
ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ತಂದೆ ರೇವಣ್ಣ ಜೊತೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ: ಸಿ.ಎಸ್ ಪುಟ್ಟರಾಜು
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಲಿದ್ದು, ನಾನೇ ಚುನಾವಣೆಯ ನೇತೃತ್ವ ವಹಿಸುತ್ತೇನೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 27,62,47,214 ರೂ. ಮೌಲ್ಯದ ವಸ್ತುಗಳ ವಶ, 205 ಎಫ್‌ಐಆರ್ ದಾಖಲು
ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸರು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 205 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಲೋಕಸಭೆ ಚುನಾವಣೆ: ಸೋಮಣ್ಣಗೆ ಕೌಂಟರ್; ಮಠಗಳಿಗೆ ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿ!
ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್‌ಪಿ ಮುದ್ದಹನುಮೇಗೌಡ ಅವರು ತುಮಕೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಚಿತ್ರದುರ್ಗ ಮತ್ತು ದಾವಣಗೆರೆಯ ಮಠಗಳಿಗೆ ಭೇಟಿ ನೀಡಿದ್ದು, ಈ ಮೂಲಕ ತಮ್ಮ ಪ್ರತಿಸ್ಪರ್ಧಿ ಸೋಮಣ್ಣ ಅವರಿಕೆ ಕೌಂಟರ್ ನೀಡಿದ್ದಾರೆ.

ಲೋಕಸಭೆ ಚುನಾವಣೆ: ಹಾವೇರಿ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳ ಬದಲಾವಣೆ? ಶೆಟ್ಟರ್- ಪಾಟೀಲ್ ಮುಖಾಮುಖಿ?
ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಹೆಸರು ಘೋಷಣೆಯಾಗಿದ್ದರೂ ಅಭ್ಯರ್ಥಿಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

