Karnataka Lokasabha Election 2024

ಲೋಕಸಭಾ ಚುನಾವಣೆ 2024: ಕಾಂಗ್ರೆಸ್'ನ 17 ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಲೋಕಸಭಾ ಚುನಾವಣೆಗೆ ರಾಜ್ಯದ 17 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮವಾಗಿದ್ದು, ಗುರುವಾರ ಪ್ರಕಟವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭೆ ಚುನಾವಣೆ: ಮೈಕ್ ಬೇಡ, ಕುರ್ಚಿ ಬೇಡ; ಮತದಾರರನ್ನು ತಲುಪಲು ಬಿಜೆಪಿ ಹೊಸ ಅಭಿಯಾನ!
ಮೊದಲ ಬಾರಿಗೆ, ಸೂಕ್ಷ್ಮ ಮಟ್ಟದಲ್ಲಿ ಮತದಾರರನ್ನು ತಲುಪುವ ಯೋಜನೆಯ ಭಾಗವಾಗಿ ಬಿಜೆಪಿ ಕರ್ನಾಟಕದಾದ್ಯಂತ ಅನೇಕ ಸ್ಥಳಗಳಲ್ಲಿ ಸಣ್ಣ ಗುಂಪುಗಳನ್ನು ಗುರಿಯಾಗಿಸಿಕೊಂಡಿದೆ. ಪಕ್ಷದ ನಾಯಕರ ಪ್ರಕಾರ ಇದು ‘ಮೈಕ್ ಬೇಡ, ಕುರ್ಚಿ ಬೇಡ’ ಎಂಬ ಅಭಿಯಾನವಾಗಿದೆ.

'ದ್ವೇಷ ಭಾಷಣ': ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಭರ್ಜರಿ ಬೇಟೆ; 5.85 ಕೋಟಿ ರೂ. ನಗದು, 21.48 ಕೋಟಿ ರೂ. ಮೌಲ್ಯದ ಮದ್ಯ ವಶ!
ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ 21.48 ಕೋಟಿ ಮೌಲ್ಯದ ಮದ್ಯ ಹಾಗೂ 5.85 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭೆ ಚುನಾವಣೆ 2024: ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸದಂತೆ ಜಿಲ್ಲಾ ಬಿಜೆಪಿ ಸುತ್ತೋಲೆ!
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಸರು ಅಧಿಕೃತ ಘೋಷಣೆ ವಿಳಂಬವಾಗುತ್ತಿರುವುದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಭದ್ರಕೋಟೆ ಹಾಸನದಲ್ಲಿ ಬಿಜೆಪಿ, ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.

ಬಿಜೆಪಿ 3ನೇ ಪಟ್ಟಿ ಮಾರ್ಚ್ 22ಕ್ಕೆ ಬಿಡುಗಡೆ, ಅಸಮಾಧಾನಿತ ನಾಯಕರೊಂದಿಗೆ ಶೀಘ್ರದಲ್ಲೇ ಮಾತುಕತೆ: ಬಿ.ಎಸ್.ಯಡಿಯೂರಪ್ಪ
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ಟಿಕೆಟ್ ಕೊಡುವುದಾಗಿ DVS ಗೆ ಡಿಸಿಎಂ ಅಭಯ; ಶೆಟ್ಟರ್ ಎಪಿಸೋಡ್ ಮರುಕಳಿಸುವ ಭಯ: ಡಿಕೆಶಿ- ಸಿಎಂ ನಡುವೆ ಭಿನ್ನಾಭಿಪ್ರಾಯ!
ಬಿಜೆಪಿ ಹಾಲಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಹಾಸನ ಅಭ್ಯರ್ಥಿ ಬದಲಿಸುವಂತೆ HDKಗೆ ಶಾ ಸೂಚನೆ: ಬಿಜೆಪಿ ಜೊತೆ ಚರ್ಚಿಸದೆ ಪ್ರಜ್ವಲ್ ಹೆಸರು ಘೋಷಣೆ!
ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಮೈತ್ರಿ ಅಭ್ಯರ್ಥಿ ಎಂದು ಘೋಷಿಸಿರುವುದರಿಂದ ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ!
ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಬುಧವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

