Karnataka Lokasabha Election 2024

ಟಿಕೆಟ್ ಕೈತಪ್ಪಿದ ಬೇಸರ: ಬಿಜೆಪಿ ತೊರೆದು 'ಕೈ' ಹಿಡಿದ RSS ಕಟ್ಟಾಳು, ಮಾಜಿ ಶಾಸಕ ಟಿ. ಗುರುಸಿದ್ದನಗೌಡ!
ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೇ ದೊಡ್ಡದಿತ್ತು. ಈ ಮಧ್ಯೆ ಸಂಸದ ಸಿದ್ದೇಶ್ವರ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸಿದ್ದರಿಂದ ಬೇಸರಗೊಂಡಿರುವ ದಾವಣಗೆರೆ ಜಗಳೂರು ಕ್ಷೇತ್ರದ ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಟಿ ಗುರುಸಿದ್ದನಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Lok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ತೇಜಸ್ವಿ ಸೂರ್ಯ vs ಸೌಮ್ಯಾ ರೆಡ್ಡಿ: ಬೆಂಗಳೂರು ದಕ್ಷಿಣ ಕ್ಷೇತ್ರ ಯಾರ ಪಾಲಿಗೆ?
ಬೆಂಗಳೂರು ವ್ಯಾಪ್ತಿಯಲ್ಲಿ ಬಿಜೆಪಿ ಪ್ರತಿಷ್ಠಿತ ಕ್ಷೇತ್ರ ಎಂದೇ ಕರೆಯಲಾಗುತ್ತಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರು ಕಣಕ್ಕಿಳಿದಿದ್ದಾರೆ.

ಬಿಜೆಪಿ ಸರ್ಕಾರದಿಂದ ಜನಸಾಮಾನ್ಯರಿಗೆ ಏನೂ ಲಾಭವಾಗಿಲ್ಲ: ಗೃಹ ಸಚಿವ ಜಿ ಪರಮೇಶ್ವರ
2024ರ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ಸಾಮಾನ್ಯ ಜನರಿಗೆ ಏನೂ ಸಿಕ್ಕಿಲ್ಲ ಮತ್ತು ಜನರು ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದಿದ್ದಾರೆ.

ಸಿಟಿ ರವಿಗೆ ಅನ್ಯಾಯವಾಗಿದೆ, ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿಎಸ್ ಯಡಿಯೂರಪ್ಪ
ಪಕ್ಷದ ಮುಖಂಡ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಂದಿನ ವರ್ಷ ರಾಜ್ಯ ರಾಜಕೀಯದಲ್ಲಿ 'ಸಾಕಷ್ಟು ಬದಲಾವಣೆ'; ಮುಖ್ಯಮಂತ್ರಿಯಾಗುವ ಸುಳಿವು ನೀಡಿದ ಎಚ್‌ಡಿಕೆ!
ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ. ದೇವರ ಇಚ್ಛೆ, ನಿಮ್ಮ ಸೇವೆ ಮಾಡಲು ನನಗೆ ಇನ್ನೊಂದು ಅವಕಾಶ ಸಿಗುತ್ತದೆ. ನಾನು ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ನಿನ್ನ ಆಶೀರ್ವಾದದಿಂದಲೇ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ.

ಚಾಮರಾಜನಗರ: ಶಾಸಕರ ಕಾರ್ಯವೈಖರಿಗೆ ಅಸಮಾಧಾನ; ಮೈಸೂರು-ಊಟಿ ಹೆದ್ದಾರಿ ಅಗಲೀಕರಣಕ್ಕೆ ಬೇಡಿಕೆ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಉತ್ಸಾಹ, ನಿರೀಕ್ಷೆಯ ಕಾವು ಹೆಚ್ಚುತ್ತಿದೆ. ಇದರ ಜೊತೆಗೆ, ಇಲ್ಲಿನ ನಿವಾಸಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ. ಈ ಬೇಡಿಕೆಗಳ ಪೈಕಿ ಮೈಸೂರು-ಊಟಿ ಹೆದ್ದಾರಿ ಅಗಲೀಕರಣವೇ ಪ್ರಮುಖ ಸ್ಥಾನ ಪಡೆದುಕೊಂಡಿದೆ.

ಖರ್ಗೆಗೆ ಚುನಾವಣಾ ತಯಾರಿ ವರದಿ ಸಲ್ಲಿಕೆ; ದಿಂಗಾಲೇಶ್ವರ ಸ್ವಾಮೀಜಿ ಬೆಂಬಲಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಿದರು.

ಡಿಕೆಶಿ- ದೇವೇಗೌಡ ಕುಟುಂಬಗಳ 'ಟೈಟಾನಿಕ್' ಘರ್ಷಣೆ: ಹೈವೋಲ್ಟೇಜ್ ಕಣವಾದ ಬೆಂಗಳೂರು ಗ್ರಾಮಾಂತರ; ಮೈತ್ರಿ ಅಭ್ಯರ್ಥಿಗೆ 'ಕ್ಲೀನ್ ಇಮೇಜ್' ವರದಾನ!
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕುಟುಂಬಗಳ ನಡುವೆ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ.

