karnataka lokayukta

TNIE ವರದಿ ಇಂಪ್ಯಾಕ್ಟ್: 'ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ, ಪೊಲೀಸರಿಗೆ ಲೋಕಾಯುಕ್ತ ಛೀಮಾರಿ, ಬಿಬಿಎಂಪಿಗೆ ನೋಟಿಸ್
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳು ಜೆಜೆ ನಗರ ಹಿಂದೂ ಸ್ಮಶಾನ ಅತಿಕ್ರಮಣ ಪ್ರಕರಣ ಕೈಗೆತ್ತಿಕೊಂಡು ವಿಚಾರಣೆಗೆ ಮುಂದಾಗಿದ್ದು, ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಛೀಮಾರಿ ಹಾಕಿದ್ದು ಮಾತ್ರವಲ್ಲದೇ ಬಿಬಿಎಂಪಿಗೆ ನೋಟಿಸ್ ಕೂಡ ಜಾರಿ ಮಾಡಿದೆ.

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆ
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮಾಡಾಳ್ ವಿರೂಪಾಕ್ಷಪ್ಪ ಮಧ್ಯಂತರ ಜಾಮೀನು ವಿರುದ್ಧ ಕರ್ನಾಟಕ ಲೋಕಾಯುಕ್ತ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಲೋಕಾಯುಕ್ತ ಚಿಂತನೆ
ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಲಂಚ ಪ್ರಕರಣ: ಬಿಜೆಪಿ ಶಾಸಕನ ಬಂಧನಕ್ಕೆ ವಿಶೇಷ ತಂಡ ರಚಿಸಿದ ಕರ್ನಾಟಕ ಲೋಕಾಯುಕ್ತ
ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ.

ಉಪ ಲೋಕಾಯುಕ್ತರ ನೇಮಕ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ
2022ರ ಜೂನ್ ತಿಂಗಳಿಂದ ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಧರಿಸಿ ಕರ್ನಾಟಕ ಹೈಕೋರ್ಟ್ ಗುರುವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ಸಿದ್ದರಾಮಯ್ಯ, ಡಿಕೆಶಿ, ರಾಬರ್ಟ್ ವಾದ್ರಾ ಸೇರಿ 'ಕೈ' ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದಾಖಲೆ ಸಮೇತ 3728 ಪುಟಗಳ ದೂರು!
ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.

ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅಕ್ರಮ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು
2013-14 ರಲ್ಲಿ ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದೆ.

"ಲೋಕಾ" ಲಂಚ ಹಗರಣ: ರಿಯಾಜ್ ಬಂಧನ
ಲೋಕಾಯುಕ್ತ ಕಚೇರಿ ಲಂಚ ಹಗರಣ ಸಂಬಂಧ ಲೋಕಾಯುಕ್ತ ಜಂಟಿ ಆಯುಕ್ತ, ಸಾರ್ವಜನಿಕ ಸಂಪರ್ಕಾಧಿಕಾರಿ ಸೈಯ್ಯದ್ ರಿಯಾಜ್ ಅವರನ್ನು ಎಸ್‍ಐಟಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ...

