Karnataka Loksabha Polls 2024

ದಾವಣಗೆರೆ: ರಾಜಕೀಯ ಕುಟುಂಬದಲ್ಲಿದ್ದರೂ ಎರಡು ದಶಕಗಳ ನಂತರ ಚುನಾವಣಾ ಕಣಕ್ಕೆ ಪ್ರಭಾ ಮಲ್ಲಿಕಾರ್ಜುನ್ ಎಂಟ್ರಿ!
ರಾಜಕೀಯ ಕುಟುಂಬದಿಂದ ಬಂದು ಎರಡು ದಶಕಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಬಾರಿಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಹಾವೇರಿ: ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ಕಾರ್ಪೋರೇಟರ್ ಗೆ ಡಿಕೆಶಿ ಕಪಾಳ ಮೋಕ್ಷ! ವಿಡಿಯೋ ವೈರಲ್
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ರಾಯ್ಬರೇಲಿಯಲ್ಲೂ ಸೋಲು ಖಚಿತ; SDPI ಬೆಂಬಲದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಅಮಿತ್ ಶಾ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮಿತ್ರ ಸಂಘಟನೆಯಾದ ಎಸ್ ಡಿಪಿಐ ಬೆಂಬಲದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಶುಕ್ರವಾರ ಪ್ರತಿಪಾದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ“ದೇಶ ವಿರೋಧಿ ಶಕ್ತಿಗಳು” ಭಾಗಿಯಾಗಿವೆ ಎಂದು ಆರೋಪಿಸಿದರು.

ಹಾವೇರಿ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕಮಿಷನ್ ಎಂದರ್ಥ: ಜೆ.ಪಿ. ನಡ್ಡಾ
ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದು ಲೇವಡಿ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕುಟುಂಬ ರಾಜಕಾರಣ ಮತ್ತು ಭ್ರಷ್ಟರನ್ನು ರಕ್ಷಿಸಲು INDIA ಮೈತ್ರಿಕೂಟ ಮಾಡಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಕೆಟ್ಟ, ವಿಭಜಕ ಗುಣ ಹೊಂದಿದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ
ಧರ್ಮಾಧಾರಿತ ಮೀಸಲಾತಿ ವಿಚಾರವನ್ನು ಸಂವಿಧಾನದ ಪ್ರಕಾರ ಮಾಡಲಾಗದಿದ್ದರೂ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಕೆಟ್ಟ ಮತ್ತು ವಿಭಜಕ ಗುಣ ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಆರೋಪಿಸಿದರು.

ಲೋಕಸಭಾ ಚುನಾವಣೆ: ಇಂದು ಬಾಗಲಕೋಟೆ, ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ
ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಚಾಮರಾಜನಗರದ ಇಂಡಿಗನತ್ತ ಮತಗಟ್ಟೆ: ಮರು ಮತದಾನ ಪ್ರಗತಿಯಲ್ಲಿ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರಿನ ಇಂಡಿಗನಾಥ ಮತಗಟ್ಟೆಯಲ್ಲಿ ಸೋಮವಾರ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಮರು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಕೇಂದ್ರ ಸರ್ಕಾರವನ್ನು ದುರ್ಬಲಗೊಳಿಸಲು ಕೆಲ ದೇಶಗಳು, ಸಂಸ್ಥೆಗಳು ಬಯಸಿವೆ: ಪ್ರಧಾನಿ ಮೋದಿ
ಸುಲಭವಾಗಿ ಲಾಭ ಗಳಿಸಲು ಭಾರತ ಮತ್ತು ಕೇಂದ್ರ ಸರ್ಕಾರ ದುರ್ಬಲವಾಗಿರಬೇಕು ಎಂದು ಕೆಲವು ದೇಶಗಳು ಮತ್ತು ಸಂಸ್ಥೆಗಳು ಬಯಸುತ್ತಿವೆ. ಕಾಂಗ್ರೆಸ್ ಕೂಡ ಈ ಭ್ರಷ್ಟಾಚಾರದ ಫಲಾನುಭವಿ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆರೋಪಿಸಿದರು.

ಲೋಕಸಭಾ ಚುನಾವಣೆ: ನಾಳೆ ಸೇಡಂನಲ್ಲಿ ಪ್ರಿಯಾಂಕಾ ವಾದ್ರಾ ಪ್ರಚಾರ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

